ನವದೆಹಲಿ: ಭಾರತ ನಿರ್ವಹಿಸುತ್ತಿರುವ ಇರಾನ್ನ ಛಾಬಹಾರ್ ಬಂದರು ಯೋಜನೆ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧಗಳಿಂದ ಆರು ತಿಂಗಳು ವಿನಾಯಿತಿ ದೊರೆತಿದೆ ಎಂದು ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಅಕ್ಟೋಬರ್ 29ರಿಂದ ಜಾರಿಗೆ ಬರುವಂತೆ ಆರು ತಿಂಗಳವರೆಗೆ ವಿನಾಯಿತಿ ನೀಡಿ ಆದೇಶಿಸಿದ್ದಾರೆ ಎಂದು ಅವರು ಹೇಳಿದರು.

ಛಾಬಹಾರ್ ಬಂದರಿನ ಕಾರ್ಯನಿರ್ವಹಣೆ ಕುರಿತು ಇರಾನ್ ಮತ್ತು ಭಾರತ ಸರ್ಕಾರ ಕಳೆದ ವರ್ಷ ಒಪ್ಪಂದ ಮಾಡಿಕೊಂಡಿವೆ. ಈ ಬಂದರು ಅಭಿವೃದ್ಧಿ ಮತ್ತು ನಿರ್ವಹಣೆ ಸಂಬಂಧ ಎರಡೂ ಸರ್ಕಾರಗಳು 2003, 2015 ಮತ್ತು 2017ರಲ್ಲಿ ಒಪ್ಪಂದ ಮಾಡಿಕೊಂಡಿದ್ದವು. 2018ರಿಂದ ಈ ಬಂದರನ್ನು ಭಾರತವೇ ನಿರ್ವಹಿಸುತ್ತಿದೆ. ಅದನ್ನು 10 ವರ್ಷಗಳಿಗೆ ವಿಸ್ತರಿಸಿ ಕಳೆದ ವರ್ಷ ಒಪ್ಪಂದ ಮಾಡಿಕೊಳ್ಳಲಾಗಿದೆ.

ಅಫ್ಗಾನಿಸ್ತಾನದ ಸಾರ್ವಭೌಮತ್ವಕ್ಕೆ ಭಾರತ ಬದ್ಧ: ಪಾಕಿಸ್ತಾನ– ಅಫ್ಗಾನಿಸ್ತಾನ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಫ್ಗಾನಿಸ್ತಾನವನ್ನು ಬೆಂಬಲಿಸಿರುವ ಭಾರತವು, ಅಫ್ಗಾನಿಸ್ತಾನದ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ಸ್ವಾತಂತ್ರ್ಯವನ್ನು ಪೂರ್ಣವಾಗಿ ಗೌರವಿಸುತ್ತದೆ ಮತ್ತು ಅದಕ್ಕೆ ಬದ್ಧವಾಗಿದೆ ಎಂದು ಪ್ರತಿಪಾದಿಸಿದೆ.