ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದ ಅತಿದೊಡ್ಡ ಆ್ಯಪಲ್ ಐಫೋನ್ ಫ್ಯಾಕ್ಟರಿಯಲ್ಲಿ ಕಾರ್ಮಿಕರ ಗಲಾಟೆ

ಸೌಲಭ್ಯ ಮತ್ತು ಅವ್ಯವಸ್ಥೆ ಬಗ್ಗೆ ಕಾರ್ಮಿಕರ ದೂರು
Last Updated 24 ನವೆಂಬರ್ 2022, 13:41 IST
ಅಕ್ಷರ ಗಾತ್ರ

ಬೀಜಿಂಗ್: ಆ್ಯಪಲ್ ಐಫೋನ್‌ ಮತ್ತು ಇತರ ಗ್ಯಾಜೆಟ್‌ಗಳನ್ನು ಉತ್ಪಾದಿಸುವ ಚೀನಾದ ಅತಿದೊಡ್ಡ ಫಾಕ್ಸ್‌ಕಾನ್ ಫ್ಯಾಕ್ಟರಿಯಲ್ಲಿ ಕಾರ್ಮಿಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗದ್ದಲ ಉಂಟಾಗಿದೆ.

ಫ್ಯಾಕ್ಟರಿಯಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸುತ್ತಿಲ್ಲ ಎಂದು ಕಾರ್ಮಿಕರು ಗಲಾಟೆ ಮಾಡಿದ್ದಾರೆ.

ಕಾರ್ಮಿಕರ ಗದ್ದಲವನ್ನು ತಣ್ಣಗಾಗಿಸಲು ಭದ್ರತಾ ಸಿಬ್ಬಂದಿ ಅವರ ವಿರುದ್ಧ ಬಲಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜತೆಗೆ, ಉದ್ಯೋಗಿಗಳು ತೊಂದರೆ ಅನುಭವಿಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡಿವೆ. ಆದರೆ, ನಂತರದಲ್ಲಿ ಆ ಪೋಸ್ಟ್‌ಗಳನ್ನು ತೆಗೆದುಹಾಕಲಾಗಿದೆ ಎಂದು ವರದಿಯಾಗಿದೆ.

ಚೀನಾದಲ್ಲಿ ಕೋವಿಡ್ ಪರಿಣಾಮ ಆ್ಯಪಲ್ ಫ್ಯಾಕ್ಟರಿಗಳನ್ನು ಮುಚ್ಚಲಾಗಿತ್ತು. ಮತ್ತೊಂದೆಡೆ, ಉದ್ಯೋಗಿಗಳಿಗೆ ಕೋವಿಡ್ ಸೋಂಕು ಹರಡದಂತೆ ತಡೆಯಲು, ಅವರನ್ನು ಫ್ಯಾಕ್ಟರಿಯಲ್ಲೇ ಉಳಿಸಲಾಗಿತ್ತು.

ಆ್ಯಪಲ್ ಐಫೋನ್ ಉತ್ಪಾದನೆಯ ಮೇಲೆ ಇದರಿಂದ ಪರಿಣಾಮವಾಗಿದೆ. ಜತೆಗೆ, ಉದ್ಯೋಗಿಗಳೂ ಆರೋಗ್ಯದ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ವರದಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT