ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಸರಕಿಗೆ ಸುಂಕ ಹೆಚ್ಚಳ ಡೊನಾಲ್ಡ್‌ ಟ್ರಂಪ್‌ ಆದೇಶ

Last Updated 11 ಮೇ 2019, 18:50 IST
ಅಕ್ಷರ ಗಾತ್ರ

ವಾಷಿಂಗ್ಟನ್‌/ಬೀಜಿಂಗ್‌: ಚೀನಾದಿಂದ ಆಮದಾಗುವ ಎಲ್ಲಾ ಸರಕುಗಳ ಮೇಲಿನ ಸುಂಕವನ್ನು ಹೆಚ್ಚಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅದೇಶಿಸಿದ್ದಾರೆ.

ಇದು ಎರಡೂ ದೇಶಗಳ ಮಧ್ಯೆ ಮೂಡಿರುವ ವಾಣಿಜ್ಯ ಬಿಕ್ಕಟ್ಟನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಜಾಗತಿಕ ಷೇರುಪೇಟೆಗಳಲ್ಲಿ ಮತ್ತಷ್ಟು ಚಂಚಲ ವಹಿವಾಟಿಗೆ ಕಾರಣವಾಗುವ ಆತಂಕ ಸೃಷ್ಟಿಸಿದೆ.

‘ಚೀನಾದಿಂದ ಆಮದಾಗುತ್ತಿರುವ ಎಲ್ಲಾ ಸರಕುಗಳ ಮೇಲಿನ ಸುಂಕ ಹೆಚ್ಚಿಸುವಂತೆ ಟ್ರಂಪ್‌ ಅವರು ಆದೇಶ ನೀಡಿದ್ದಾರೆ’ ಎಂದು ಅಮೆರಿಕದ ವಾಣಿಜ್ಯ ಪ್ರತಿನಿಧಿ ರಾಬರ್ಟ್‌ ಲಿಟ್ಜರ್ ತಿಳಿಸಿದ್ದಾರೆ.

‘ಚೀನಾದಿಂದ ಆಮದಾಗುತ್ತಿರುವ ₹ 140 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಸರಕುಗಳ ಮೇಲಿನ ಆಮದು ಸುಂಕವನ್ನು ಶೇ 10 ರಿಂದ ಶೇ 25ಕ್ಕೆ ಹೆಚ್ಚಿಸುವಂತೆ ಆದೇಶ ನೀಡಲಾಗಿದೆ.

‘ಇದಲ್ಲದೆ ಇನ್ನುಳಿದ ₹ 2.10 ಲಕ್ಷ ಕೋಟಿ ಮೌಲ್ಯದ ಸರಕುಗಳ ಮೇಲಿನ ಸುಂಕವನ್ನು ಹೆಚ್ಚಿಸುವ ಪ್ರಕ್ರಿಯೆ ಆರಂಭಿಸುವಂತೆಯೂ ಆದೇಶ ನೀಡಿದ್ದಾರೆ’ ಎಂದು ಹೇಳಿದ್ದಾರೆ.

ವಾಣಿಜ್ಯ ಬಿಕ್ಕಟ್ಟು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ವಾಷಿಂಗ್ಟನ್‌ನಲ್ಲಿ ನಡೆದ 11ನೇ ಸುತ್ತಿನ ಮಾತುಕತೆ ಯಾವುದೇ ಫಲ ನೀಡಿಲ್ಲ.

ಸಂಧಾನ ಮಾತುಕತೆ ಮುರಿದುಬಿದ್ದಿಲ್ಲ. ದ್ವಿಪಕ್ಷೀಯ ಒಪ್ಪಂದದಲ್ಲಿ ಸ್ವಲ್ಪ ಹಿನ್ನಡೆಯಾಗಿದೆ.ಒಪ್ಪಂದಕ್ಕೆ ಬರುವ ಆಶಾವಾದ ಹೊಂದಿದ್ದೇವೆ ಎಂದು ಚೀನಾದ ವಕ್ತಾರರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT