ಗುರುವಾರ , ನವೆಂಬರ್ 26, 2020
22 °C

ಚೇತರಿಸಿಕೊಂಡ ಚೀನಾ ಆರ್ಥಿಕತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್: ಕೊರೊನಾ ವೈರಸ್‌ ಸೋಂಕಿನ ಪರಿಣಾಮದಿಂದ ಮೊದಲ ತ್ರೈಮಾಸಿಕದಲ್ಲಿ ಶೇಕಡ 6.8ರಷ್ಟು ಕುಸಿತ ಕಂಡಿದ್ದ ಚೀನಾದ ಆರ್ಥಿಕ ಬೆಳವಣಿಗೆ ದರವು ಮೂರನೇ ತ್ರೈಮಾಸಿಕದಲ್ಲಿ ಶೇ 4.9ರಷ್ಟು ಚೇತರಿಕೆ ಕಂಡುಕೊಂಡಿದೆ.

ಬೇಡಿಕೆ ಮತ್ತು ಖರೀದಿ ಹೆಚ್ಚಿಸಲು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳಿಂದಾಗಿ ಆರ್ಥಿಕತೆಯು 44 ವರ್ಷಗಳ ಕನಿಷ್ಠ ಮಟ್ಟದಿಂದ ಚೇತರಿಕೆ ಕಂಡುಕೊಂಡಿದೆ.

ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯನ್ನು ಚೀನಾ ಹೊಂದಿದೆ. ಎರಡನೇ ತ್ರೈಮಾಸಿಕದಲ್ಲಿ ಶೇ 3.2ರಷ್ಟು ಬೆಳವಣಿಗೆ ಕಂಡಿತ್ತು. ಮೂರನೇ ತ್ರೈಮಾಸಿಕದಲ್ಲಿ ಅದಕ್ಕಿಂತಲೂ ಉತ್ತಮ ಬೆಳವಣಿಗೆ ಸಾಧ್ಯವಾಗಿದೆ. ಕೈಗಾರಿಕಾ ಉತ್ಪಾದನೆ, ರಿಟೇಲ್‌ ಮಾರಾಟದಲ್ಲಿ ಏರಿಕೆ ಕಂಡುಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು