ಜನವರಿ ಒಂದೇ ತಿಂಗಳಲ್ಲಿ ಜಾಗತಿಕವಾಗಿ 1 ಲಕ್ಷ ಟೆಕ್ಕಿಗಳು ಕೆಲಸದಿಂದ ವಜಾ

ನವದೆಹಲಿ: ಜಾಗತಿಕವಾಗಿ ಜನವರಿ ಒಂದೇ ತಿಂಗಳಲ್ಲಿ ಬರೋಬ್ಬರಿ 1 ಲಕ್ಷ ಟೆಕ್ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ಅಂದರೆ ನಿತ್ಯ ಸರಾಸರಿ 3,300 ಮಂದಿ ಕೆಲಸ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ತಿಂಗಳಲ್ಲಿ ಪ್ರಪಂಚದಾದ್ಯಂತ ಸುಮಾರು 288 ಟೆಕ್ ಕಂಪನಿಗಳು ಉದ್ಯೋಗ ಕಡಿತ ಮಾಡಿವೆ. ಇ–ಕಾಮರ್ಸ್ ಕ್ಷೇತ್ರದ ದೈತ್ಯ ಕಂಪನಿ ಅಮೆಜಾನ್ ( 18,000), ತಂತ್ರಜ್ಞಾನ ಕ್ಷೇತ್ರದ ದೊಡ್ಡ ಕಂಪನಿಗಳಾದ ಗೂಗಲ್ (12,000) ಹಾಗೂ ಮೈಕ್ರೊಸಾಫ್ಟ್ (10,000) ಅತಿಹೆಚ್ಚು ಟೆಕ್ ಉದ್ಯೋಗಿಗಳನ್ನು ವಜಾ ಮಾಡಿವೆ. ನಂತರದ ಸ್ಥಾನಗಳಲ್ಲಿ ಸೇಲ್ಸ್‌ಫೋರ್ಸ್ (7,000), ಐಬಿಎಂ (3,900) ಹಾಗೂ ಸ್ಯಾಪ್ (3,000) ಕಂಪನಿಗಳಿವೆ.
ಉದ್ಯೋಗ ಕಡಿತಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿರುವ Layoffs.fyi ವೆಬ್‌ಸೈಟ್‌ನ ಮಾಹಿತಿ ಪ್ರಕಾರ, 2022ರಲ್ಲಿ ಒಂದು ಸಾವಿರಕ್ಕೂ ಹೆಚ್ಚು ಕಂಪನಿಗಳು 1,54,336 ಉದ್ಯೋಗಿಗಳನ್ನು ವಜಾ ಮಾಡಿವೆ. ಹೀಗಾಗಿ 2022ರಿಂದ ಇದುವರೆಗೆ 2.5 ಲಕ್ಷ ಟೆಕ್ ಉದ್ಯೋಗಿಗಳು ಕೆಲಸ ಕಳೆದುಕೊಂಡಂತಾಗಿದೆ.
ಉದ್ಯೋಗ ಕಡಿತ ಮಾಡುತ್ತಿರುವ ದೊಡ್ಡ ದೊಡ್ಡ ಕಂಪನಿಗಳು ಅಸ್ಥಿರ ಜಾಗತಿಕ ಆರ್ಥಿಕ ಪರಿಸ್ಥಿತಿ, ಕೋವಿಡ್–19 ಸೃಷ್ಟಿಸಿದ ಬಿಕ್ಕಟ್ಟು, ಅತಿಯಾದ ನೇಮಕಾತಿ ಸೇರಿದಂತೆ ಹಲವು ಕಾರಣಗಳನ್ನು ನೀಡುತ್ತಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.