ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರಿಗೆ ಸೋರಿಕೆ ತಡೆಗಟ್ಟಲು ಮುಖ್ಯಮಂತ್ರಿ ಸೂಚನೆ

Last Updated 7 ಮೇ 2020, 20:24 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಈಗ ಮತ್ತೆ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ತೆರಿಗೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು.

ಗುರುವಾರ ಇಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ‘ನಕಲಿ ಇ-ವೇ ಬಿಲ್‌ಗಳ ಬಳಕೆ, ಸರಕು ಸಾಗಣೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದರು.

ಆರ್ಥಿಕ ಚಟುವಟಿಕೆ ಮತ್ತೆ ಬೇಗ ಹಳಿಗೆ ಮರಳಬೇಕಾಗಿದೆ. ತೆರಿಗೆ ಸಂಗ್ರಹ ಹೆಚ್ಚಿಸಲೇಬೇಕು ಎಂಬ ಕಾರಣಕ್ಕೆ ಸಣ್ಣ‍–ಪುಟ್ಟ ವ್ಯಾಪಾರಿಗಳಿಗೆ ಕಿರುಕುಳ ನೀಡಿದರೆ ಸಹಿಸಲಾಗದು. ಈ ಬಗ್ಗೆ ಎಚ್ಚರವಹಿಸಿ ಎಂದು ಸೂಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT