ಶನಿವಾರ, ಜುಲೈ 2, 2022
25 °C

ಪೆಟ್ರೋಲ್‌, ಡೀಸೆಲ್‌ ಬಳಿಕ ಸಿಎನ್‌ಜಿ, ಪಿಎನ್‌ಜಿ ದರದಲ್ಲೂ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಾದ್ಯಂತ ಪೆಟ್ರೋಲ್‌, ಡೀಸೆಲ್‌ ಹಾಗೂ ಗೃಹ ಬಳಕೆ ಎಲ್‌ಪಿಜಿ ದರ ಏರಿಕೆಯಾಗಿರುವ ಬೆನ್ನಲ್ಲೇ ಸಿಎನ್‌ಜಿ ಮತ್ತು ಕೊಳವೆ ಮೂಲಕ ಮನೆಗಳಿಗೆ ಪೂರೈಕೆಯಾಗುತ್ತಿರುವ ಅಡುಗೆ ಅನಿಲ (ಪಿಎನ್‌ಜಿ) ದರದಲ್ಲೂ ಹೆಚ್ಚಳ ಮಾಡಲಾಗಿದೆ. ಗುರುವಾರ ದೆಹಲಿಯಲ್ಲಿ ಸಿಎನ್‌ಜಿ ದರ ಪ್ರತಿ ಕೆಜಿಗೆ ಒಂದು ರೂಪಾಯಿ ಹೆಚ್ಚಿಸಲಾಗಿದೆ.

ಪ್ರತಿ ಕೆಜಿ ಸಿಎನ್‌ಜಿ ದರ 59.01 ರೂಪಾಯಿ ಮತ್ತು ಪ್ರತಿ ಕ್ಯೂಬಿಕ್‌ ಮೀಟರ್‌ ಪಿಎನ್‌ಜಿ ದರ 36.61 ರೂಪಾಯಿ ತಲುಪಿದೆ. ಕಳೆದ ಎರಡು ದಿನಗಳಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರ ತಲಾ 1.60 ರೂಪಾಯಿಯಷ್ಟು ಏರಿಕೆಯಾಗಿದೆ. ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ದರ 50 ರೂಪಾಯಿ ಹೆಚ್ಚಳವಾಗಿದೆ.

ಜಾಗತಿಕವಾಗಿ ನೈಸರ್ಗಿಕ ಅನಿಲ ದರದಲ್ಲಿ ಏರಿಕೆಯಾಗಿರುವುದರಿಂದ ಈ ತಿಂಗಳು ಮೂರನೇ ಬಾರಿಗೆ ಸಿಎನ್‌ಜಿ ದರ ಹೆಚ್ಚಳ ಕಂಡಿದೆ. ಕಳೆದ ಎರಡು ಬಾರಿಯ ದರ ಏರಿಕೆಯಲ್ಲಿ ಪ್ರತಿ ಕೆಜಿ ಸಿಎನ್‌ಜಿಗೆ ಒಟ್ಟು 50 ಪೈಸೆ ಹೆಚ್ಚಳವಾಗಿದೆ. ಈ ವರ್ಷ ಪ್ರತಿ ಕೆಜಿಗೆ ಒಟ್ಟು ₹5.50ರಷ್ಟು ಏರಿಕೆಯಾಗಿದೆ.

ನೋಯ್ಡಾ, ಗ್ರೇಟರ್‌ ನೋಯ್ಡಾ ಹಾಗೂ ಗಾಜಿಯಾಬಾದ್‌ನಲ್ಲಿ ಪ್ರತಿ ಕೆಜಿ ಸಿಎನ್‌ಜಿ ದರ ₹61.58 ಹಾಗೂ ಗುರುಗ್ರಾಮದಲ್ಲಿ ₹67.37 ಇದೆ.

ಇದನ್ನೂ ಓದಿ–

ಇಂದು ಪೆಟ್ರೋಲ್‌ ಮತ್ತು ಡೀಸೆಲ್‌ ದರ ಪರಿಷ್ಕೃತಗೊಂಡಿಲ್ಲ. ಕ್ರಿಸಿಲ್‌ ರಿಸರ್ಚ್‌ ಪ್ರಕಾರ, ಪ್ರತಿ ಬ್ಯಾರೆಲ್‌ ಕಚ್ಚಾ ತೈಲದ ಸರಾಸರಿ ದರವು 100 ಇದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ರಿಟೇಲ್‌ ಮಾರಾಟ ದರವನ್ನು ಪ್ರತಿ ಲೀಟರ್‌ಗೆ 9ರಿಂದ 12 ರೂಪಾಯಿ ಹೆಚ್ಚಿಸುವುದು ಅವಶ್ಯವಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು