ಶನಿವಾರ, ಆಗಸ್ಟ್ 13, 2022
25 °C

ಸಹಕಾರ ಬ್ಯಾಂಕ್‌ಗಳಿಂದಲೂ ನೇರ ನಗದು ವರ್ಗಾವಣೆ: ಶಾ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್ (ಪಿಟಿಐ): ಗ್ರಾಹಕರ ಜನಧನ್ ಖಾತೆ, ಆಧಾರ್ ಮತ್ತು ಮೊಬೈಲ್‌ ಸಂಖ್ಯೆಯನ್ನು ಆಧಾರವಾಗಿ ಇರಿಸಿಕೊಂಡು, ಕೇಂದ್ರದ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನೀಡುವ ಹಣಕಾಸಿನ ನೆರವನ್ನು ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆ ಮಾಡುವ ಅವಕಾಶವನ್ನು ಸಹಕಾರ ಬ್ಯಾಂಕ್‌ಗಳಿಗೂ ನೀಡಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಈಗ ಒಟ್ಟು 52 ಸಚಿವಾಲಯಗಳು ಜನಧನ್ ಖಾತೆ, ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಫಲಾನುಭವಿಗಳ ಖಾತೆಗೆ ಹಣವನ್ನು ನೇರವಾಗಿ ವರ್ಗಾವಣೆ ಮಾಡುತ್ತಿವೆ ಎಂದು ಶಾ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ‘ಸಹಕಾರ ಬ್ಯಾಂಕ್‌ಗಳೂ ಈ ಸೇವೆಗಳನ್ನು ನೀಡುವುದು ಶೀಘ್ರದಲ್ಲಿಯೇ ಶುರುವಾಗಲಿದೆ. ಇದರಿಂದಾಗಿ ಜನಸಾಮಾನ್ಯರ ಜೊತೆ ನಾವು ಹೊಂದಿರುವ ಸಂಪರ್ಕವು ಇನ್ನಷ್ಟು ಹೆಚ್ಚಲಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು