ಗುರುವಾರ , ಸೆಪ್ಟೆಂಬರ್ 23, 2021
22 °C

ಕಾಫಿ ಡೇ ಗ್ಲೋಬಲ್‌ಗೆ ₹ 59.38 ಕೋಟಿ ನಷ್ಟ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಫಿ ಡೇ ಎಂಟರ್‌ಪ್ರೈಸಸ್‌ನ ಅಂಗಸಂಸ್ಥೆಯಾಗಿರುವ ಕಾಫಿ ಡೇ ಗ್ಲೋಬಲ್‌ ಲಿಮಿಟೆಡ್‌, ಜುಲೈ–ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹ 59.38 ಕೋಟಿ ನಷ್ಟ ಅನುಭವಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿಗೆ ₹ 98.42 ಕೋಟಿ ನಷ್ಟ ಆಗಿತ್ತು ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಕಾರ್ಯಾಚರಣಾ ವರಮಾನವು ₹ 78.69 ಕೋಟಿಗಳಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಇದು ₹ 364.24 ಕೋಟಿ ಆಗಿತ್ತು.

ಷೇರುಪೇಟೆಯಲ್ಲಿ ನೋಂದಣಿ ಆಗದೇ ಇದ್ದರೂ 2015ರ ಲಿಸ್ಟಿಂಗ್‌ ನಿಯಮಗಳ ಆಧಾರದ ಮೇಲೆ ಸ್ವಯಂಪ್ರೇರಣೆಯಿಂದ ಹಣಕಾಸು ಫಲಿತಾಂಶ ಸಿದ್ಧಪಡಿಸಿರುವುದಾಗಿ ಕಾಫಿ ಡೇ ಗ್ಲೋಬಲ್‌ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು