ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

2023-24ನೇ ಆರ್ಥಿಕ ವರ್ಷದಲ್ಲಿ ಕಾಫಿ ರಫ್ತು ಶೇ 12ರಷ್ಟು ಏರಿಕೆ

Published 24 ಮೇ 2024, 14:35 IST
Last Updated 24 ಮೇ 2024, 14:35 IST
ಅಕ್ಷರ ಗಾತ್ರ

ನವದೆಹಲಿ : 2023-24ನೇ ಆರ್ಥಿಕ ವರ್ಷದಲ್ಲಿ ₹10,636 ಕೋಟಿ ಮೌಲ್ಯದ ಕಾಫಿ ರಫ್ತು ಮಾಡಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 12.22ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.

2022–23ನೇ ಆರ್ಥಿಕ ವರ್ಷದಲ್ಲಿ ಭಾರತದಿಂದ ₹9,473 ಕೋಟಿ ಮೌಲ್ಯದ ಕಾಫಿ ರಫ್ತು ಮಾಡಲಾಗಿತ್ತು. ರೊಬಸ್ಟಾ ಕಾಫಿಗೆ ಹೆಚ್ಚಿದ ಬೇಡಿಕೆಯಿಂದಾಗಿ ರಫ್ತು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಹೇಳಿದೆ.

ಏಷ್ಯಾ ಖಂಡದಲ್ಲಿ ಭಾರತವು ಅತಿಹೆಚ್ಚಿನ ಪ್ರಮಾಣದಲ್ಲಿ ಕಾಫಿ ಬೆಳೆಯುವ ಮತ್ತು ರಫ್ತು ಮಾಡುವ ಮೂರನೇ ದೊಡ್ಡ ರಾಷ್ಟ್ರವಾಗಿದೆ.  

2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ 1.25 ಲಕ್ಷ ಟನ್‌ನಷ್ಟು ಕಾಫಿ ರಫ್ತು ಮಾಡಲಾಗಿದೆ. ಇದರ ಹಿಂದಿನ ಆರ್ಥಿಕ ವರ್ಷದಲ್ಲಿ 1.10 ಲಕ್ಷ ಟನ್‌ನಷ್ಟು ರಫ್ತು ಮಾಡಲಾಗಿತ್ತು. ಈ ಅವಧಿಯಲ್ಲಿ ಒಟ್ಟಾರೆ ರಫ್ತಿನಲ್ಲಿ ಶೇ 13.35ರಷ್ಟು ಏರಿಕೆಯಾಗಿದೆ.  

ದೇಶದಿಂದ ಇಟಲಿ, ರಷ್ಯಾ, ಯುಎಇ, ಜರ್ಮನಿ ಮತ್ತು ಟರ್ಕಿಗೆ ಅತಿಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲಾಗುತ್ತದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT