ನವದೆಹಲಿ: ಸರ್ಫೆಸಿ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ರಾಜ್ಯದಲ್ಲಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಹಾಸನ ಜಿಲ್ಲೆಯ ಕಾಫಿ ಬೆಳೆಗಾರರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸಂಸತ್ ಭವನದ ಕಚೇರಿಯಲ್ಲಿ ಸೋಮವಾರ ಕುಮಾರಸ್ವಾಮಿ ಅವರೊಂದಿಗೆ ಗೋಯಲ್ ಅವರನ್ನು ಭೇಟಿಯಾದ ಬೆಳೆಗಾರರು, ‘ಈ ಕಾಯ್ದೆಯಿಂದ ಸಣ್ಣ, ಮಧ್ಯಮ ಗಾತ್ರದ ಕಾಫಿ ಹಿಡುವಳಿದಾರರು ಅತೀವ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬ್ಯಾಂಕುಗಳು ಮತ್ತು ಆನ್ ಲೈನ್ ಹರಾಜಿನಲ್ಲಿ ಭಾಗವಹಿಸುವ ವಿದೇಶಿ ಬಿಡ್ಡರುಗಳ ಶಾಮೀಲಿನ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ಮಾಡುವುದಕ್ಕೂ ನಮ್ಮಲ್ಲಿ ಹಣವಿಲ್ಲ’ ಎಂದು ಅಲವತ್ತುಕೊಂಡರು.

ನಿಯೋಗದ ನೇತೃತ್ವ ವಹಿಸಿದ್ದ ಸಚಿವ ಕುಮಾರಸ್ವಾಮಿ, ‘ಈ ಕಾಯ್ದೆಯಿಂದ ಕಾಫಿ ಬೆಳೆಗಾರರು ಅನೇಕ ಆಸ್ತಿಗಳನ್ನು ಈಗಾಗಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಹಣಕಾಸು ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಹೇಗಾದರೂ ಮಾಡಿ ಈ ಸಂಕಷ್ಟದಿಂದ ಕಾಫಿ ಬೆಳೆಗಾರರನ್ನು ಪಾರು ಮಾಡಬೇಕು’ ಎಂದು ಕೋರಿದರು.

ವಿದೇಶಿ ಬಿಡ್ಡರುಗಳು ಆನ್ಲೈನ್ ಹರಾಜಿನಲ್ಲಿ ಭಾಗಿಯಾಗುವುದನ್ನು ತಡೆಯುವ ಬಗ್ಗೆ ವಿತ್ತ ಸಚಿವರು ಭರವಸೆ ನೀಡಿದ್ದಾರೆ. ತಾವೂ ಈ ನಿಟ್ಟಿನಲ್ಲಿ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಬೇಕು ಎಂದರು.

‘ಈ ಬಗ್ಗೆ ನನ್ನ ಇಲಾಖೆಯಿಂದಲೂ ಪರಿಶೀಲನೆ ನಡೆಸಲಾಗುವುದು ಹಾಗೂ ವಿತ್ತ ಸಚಿವರಲ್ಲಿ ಮನವಿ ಮಾಡಲಾಗುವುದು’ ಎಂದು ಗೋಯಲ್ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.