ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಣ್ಯ ಸ್ವೀಕರಿಸಿ: ಆರ್‌ಬಿಐ

Last Updated 26 ಜೂನ್ 2019, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ವಿವಿಧ ಮುಖಬೆಲೆಯ ನಾಣ್ಯಗಳ ಚಲಾವಣೆಗೆ ಸಂಬಂಧಿಸಿದಂತೆ ಹರಡಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿರುವ ಆರ್‌ಬಿಐ, ಜನರಲ್ಲಿ ಮೂಡಿರುವ ಅನುಮಾನಗಳನ್ನು ದೂರ ಮಾಡಿದೆ.

ಜನರ ದಿನಬಳಕೆಯ ಅಗತ್ಯಗಳನ್ನು ಈಡೇರಿಸುವ ಉದ್ದೇಶದಿಂದಲೇ ವಿವಿಧ ಮುಖಬೆಲೆಯ ನಾಣ್ಯಗಳನ್ನು ಟಂಕಿಸಲಾಗಿದೆ. ಕಾಲ, ಕಾಲಕ್ಕೆ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಉದ್ದೇಶದಿಂದ ನಾಣ್ಯಗಳನ್ನು ಟಂಕಿಸಿ ಚಲಾವಣೆಗೆ ತರಲಾಗುತ್ತಿದೆ.

ನಾಣ್ಯಗಳ ಬಳಕೆಗೆ ಸಂಬಂಧಿಸಿದಂತೆ ಹರಡುವ ವದಂತಿಗಳಿಗೆ ಜನರು ಕಿವಿಗೊಡಬಾರದು. ನಾಣ್ಯಗಳು ಹಣ ಪಾವತಿಯ ಅಧಿಕೃತ ಮಾಧ್ಯಮ ಆಗಿರುವುದಕ್ಕೆ ಕಾನೂನಿನ ಮಾನ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೇ ಅವುಗಳನ್ನು ಸ್ವೀಕರಿಸಿ ಬಳಸಬೇಕು ಎಂದು ಮನವಿ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT