ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ದರ ₹8ರಷ್ಟು ಹೆಚ್ಚಳ

Published 1 ಜುಲೈ 2023, 12:23 IST
Last Updated 1 ಜುಲೈ 2023, 12:23 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆ.ಜಿ ತೂಕದ ಎಲ್‌ಪಿಜಿ ಸಿಲಿಂಡರ್ ದರವನ್ನು ಶನಿವಾರ ಹೆಚ್ಚಿಸಿವೆ. ದೆಹಲಿಯನ್ನು ಹೊರತುಪಡಿಸಿ ಪ್ರಮುಖ ನಗರಗಳಲ್ಲಿ ಏರಿಕೆ ಕಂಡಿದೆ.

‘ಬೆಂಗಳೂರಿನಲ್ಲಿ ₹8ರಷ್ಟು ಏರಿಕೆ ಕಂಡಿದ್ದು, ₹1,860ಕ್ಕೆ ತಲುಪಿದೆ’ ಎಂದು ಹೋಟೆಲ್‌ ಉದ್ಯಮದ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ₹1,773 ಇದೆ. ಮುಂಬೈನಲ್ಲಿ ₹8.50ರಷ್ಟು ಹೆಚ್ಚಾಗಿ ₹1,733ಕ್ಕೆ ಏರಿಕೆ ಆಗಿದೆ. ಕೋಲ್ಕತ್ತದಲ್ಲಿ ₹20ರಷ್ಟು ಏರಿಕೆ ಕಂಡು ₹1,895ಕ್ಕೆ ತಲುಪಿದೆ. ಮನೆಗಳಲ್ಲಿ ಅಡುಗೆಗೆ ಬಳಸುವ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT