ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆ ಮಾಡಲಾಗಿದೆ. 19 ಕೆ.ಜಿ ಸಿಲಿಂಡರ್‌ನ ಬೆಲೆ ₹48.50 ಹಾಗೂ 5 ಕೆ.ಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹12 ಏರಿಕೆ ಮಾಡಲಾಗಿದೆ.
ಇಂದಿನಿಂದಲೇ (ಅ.1) ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.
ಬೆಲೆ ಏರಿಕೆ ಬಳಿಕ ಬೆಂಗಳೂರಿನಲ್ಲಿ 19 ಕೆ.ಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ₹1,818 ಹಾಗೂ ದೆಹಲಿಯಲ್ಲಿ ₹1,740 ಆಗಿದೆ.
ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ, 14 ಕೆ.ಜಿ ಸಿಲಿಂಡರ್ ಬೆಲೆ ₹803 ಇದೆ.
ದಸರಾ, ದೀಪಾವಳಿಯಂತಹ ಪ್ರಮುಖ ಹಬ್ಬಗಳು ಬರುತ್ತಿರುವ ನಡುವೆಯೇ ಬೆಲೆ ಏರಿಕೆಯಾಗಿದೆ. ಸೆಪ್ಟೆಂಬರ್‌ನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ₹39 ಏರಿಕೆ ಮಾಡಲಾಗಿತ್ತು. ಈಗ ಮತ್ತೆ ದರ ಏರಿಕೆ ಮಾಡಲಾಗಿದೆ.
ಈ ಬೆಲೆ ಪರಿಷ್ಕರಣೆಯು ಪ್ರತಿನಿತ್ಯ ಸಿಲಿಂಡರ್ ಬಳಸುವ ರೆಸ್ಟೋರೆಂಟ್, ಹೋಟೆಲ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರವಾಗಿ ಪರಿಣಾಮ ಬೀರಲಿದೆ.