ಬುಧವಾರ, ಜುಲೈ 6, 2022
21 °C

ವಾಣಿಜ್ಯ ಬಳಕೆಯ ಸಿಲಿಂಡರ್ ದರ ದೆಹಲಿಯಲ್ಲಿ ₹105, ಕೋಲ್ಕತ್ತದಲ್ಲಿ ₹108 ಹೆಚ್ಚಳ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್‌ ದರ ಮಂಗಳವಾರ ದೆಹಲಿಯಲ್ಲಿ ₹105, ಕೋಲ್ಕತ್ತದಲ್ಲಿ ₹108 ಹೆಚ್ಚಳವಾಗಿದೆ.

5 ಕೆ.ಜಿಯ ಸಿಲಿಂಡರ್‌ ದರವು ₹27 ಏರಿಕೆಯಾಗಿದೆ.

ಆದರೆ, ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಹೊಸ ದರವು ಇಂದಿನಿಂದಲೇ ಜಾರಿಗೆ ಬರಲಿದೆ.

ಫೆ.1ರಂದು ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆಯಲ್ಲಿ ₹91.50 ಕಡಿತವಾಗಿತ್ತು.

ರಷ್ಯಾ–ಉಕ್ರೇನ್‌ ಸಂಘರ್ಷದಿಂದ ಕಚ್ಚಾ ತೈಲ ದರ ಏರಿಕೆ ಆಗಿದೆ. ಇದು ಭಾರತದ ಆರ್ಥಿಕ ಬೆಳವಣಿಗೆಗೂ ತೊಡಕು ಉಂಟುಮಾಡಲಿದೆ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು