ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಹೆಚ್ಚಳ

ಇಂದಿನಿಂದಲೇ ಜಾರಿ
Published 1 ಅಕ್ಟೋಬರ್ 2023, 5:29 IST
Last Updated 1 ಅಕ್ಟೋಬರ್ 2023, 5:29 IST
ಅಕ್ಷರ ಗಾತ್ರ

ನವದೆಹಲಿ: ವಾಣಿಜ್ಯ ಉದ್ದೇಶಕ್ಕೆ ಬಳಸಲ್ಪಡುವ ಎಲ್‌ಪಿಜಿ ಸಿಲಿಂಡರ್ ದರವನ್ನು ಮತ್ತೆ ಹೆಚ್ಚಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹209 ಹೆಚ್ಚಿಸಲಾಗಿದೆ.

ಈ ಮೂಲಕ ಪರಿಸ್ಕೃತ ದರ ದೆಹಲಿ ಮಾರುಕಟ್ಟೆಯಲ್ಲಿ 1,731 ಕ್ಕೆ ಲಭ್ಯವಾಗುತ್ತದೆ. 14.2 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.

ಈ ಮೂಲಕ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಜುಲೈನಿಂದ ಸತತ ನಾಲ್ಕು ತಿಂಗಳೂ ಹೆಚ್ಚಳ ಮಾಡಿದಂತಾಗಿದೆ.

ಭಾನುವಾರವಷ್ಟೇ ಜೆಟ್ ಇಂಧನ (ಎಟಿಎಫ್) ಬೆಲೆಯನ್ನು ಶೇ 5 ರಷ್ಟು ಹೆಚ್ಚಳ ಮಾಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆ ಮಾನದಂಡಗಳಿಗನುಗುಣವಾಗಿ ಈ ಹೆಚ್ಚಳ ಆಗಿದೆ ಎಂದು ತೈಲ ನಿಗಮಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT