ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ತೈಲ ಸರಬರಾಜಿಗೆ ಅಡ್ಡಿಯಾಗಿದ್ದು, ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದೆ. ದೇಶದಾದ್ಯಂತ ಸಿಲಿಂಡರ್ ಬೆಲೆಯಲ್ಲಿ ₹42ರಿಂದ ₹53 ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.

ಈ ಮೂಲಕ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ₹42 ಹೆಚ್ಚಳವಾಗಿದ್ದು, ₹3,113ಕ್ಕೆ ಏರಿಕೆ ಕಂಡಿದೆ.

ಕೋಲ್ಕತ್ತದಲ್ಲಿ ₹53,49 ಏರಿಕೆ ಕಂಡಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹3,2250ಕ್ಕೆ ಏರಿದೆ.

ಸರ್ಕಾರವು ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಿಗೆ ಕನಿಷ್ಠ 30 ದಿನಗಳ ಬೇಡಿಕೆಗೆ ಬೇಕಾದಷ್ಟು ಎಲ್ಪಿಜಿ ಸಂಗ್ರಹಕ್ಕೆ ನಿರ್ದೇಶನ ನೀಡಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದ್ದಾರೆ.

ಈ ವರ್ಷದ ಆರಂಭದಿಂದಲೂ ವಾಣಿಜ್ಯ ಬಳೆಕೆಯ ಎಲ್ಪಿಜಿ ಬೆಲೆ ಏರಿಕೆ ಕಾಣುತ್ತಲೇ ಇದೆ. ದೆಹಲಿಯಲ್ಲಿ ಜನವರಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ₹1,691.50 . ಇತ್ತು. ಈಗ ₹3,113.50ಗೆ ಏರಿದೆ.

ಫೆಬ್ರುವರಿಯಲ್ಲಿ, ₹49, ಮಾರ್ಚ್ನಲ್ಲಿ ₹115, ಏಪ್ರಿಲ್ನಲ್ಲಿ ₹993 ಹೆಚ್ಚಳ ಮಾಡಲಾಗಿತ್ತು. ಇದರ ಪರಿಣಾಮವಾಗಿ ಕೇವಲ ಐದು ತಿಂಗಳಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ದರ ದ್ವಿಗುಣಗೊಂಡಿದೆ.

ಬೆಲೆ ಏರಿಕೆ ಬಳಿಕ ಮುಂಬೈನಲ್ಲಿ 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ₹3,024.50. ಚೆನ್ನೈನಲ್ಲಿ ₹3,232 ಹಾಗೂ ಹೈದರಾಬಾದ್ ಮತ್ತು ಪಾಟ್ನಾದಲ್ಲಿ ಕ್ರಮವಾಗಿ ₹3,294 ಮತ್ತು ₹3,322 ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.