ಸೋಮವಾರ, ಫೆಬ್ರವರಿ 24, 2020
19 °C

‘ಜಿಎಸ್‌ಟಿ ಪರಿಹಾರ ನೀಡಲು ಬದ್ಧ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ‘ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಜಿಎಸ್‌ಟಿ ಜಾರಿಗೊಳಿಸುವುದರಿಂದ ರಾಜ್ಯಗಳಿಗೆ ಆಗುವ ವರಮಾನ ನಷ್ಟ ತುಂಬಿಕೊಡಲು ಕೇಂದ್ರ ಸರ್ಕಾರವು ಮೊದಲ ಐದು ವರ್ಷಗಳಿಗೆ ಪರಿಹಾರ ನೀಡಲು ನಿರ್ಧರಿಸಿದೆ. ಆದರೆ, ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ರಾಜ್ಯಸಭೆಯಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಪರಿಹಾರ ಮೊತ್ತವು ಯಾವಾಗ ರಾಜ್ಯಗಳ ಕೈಸೇರಲಿದೆ ಎನ್ನುವುದಕ್ಕೆ ಅವರು ಉತ್ತರ ನೀಡಿಲ್ಲ. ಜಿಎಸ್‌ಟಿ ಸೆಸ್‌ನಿಂದ ಸಂಗ್ರಹಿಸಿರುವ ಮೊತ್ತದಲ್ಲಿ ₹9,783 ಕೋಟಿ ಬಿಡುಗಡೆ ಮಾಡಲಾಗಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು