ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯೂಚುವಲ್‌ ಫಂಡ್ ಸ್ಥಗಿತಕ್ಕೆ ಮುನ್ನ ಒಪ್ಪಿಗೆ ಅಗತ್ಯ: ಸುಪ್ರೀಂ ಕೋರ್ಟ್

Last Updated 14 ಜುಲೈ 2021, 14:10 IST
ಅಕ್ಷರ ಗಾತ್ರ

ನವದೆಹಲಿ: ಸಾಲಪತ್ರ ಆಧಾರಿತ ಮ್ಯೂಚುವಲ್‌ ಫಂಡ್‌ಗಳನ್ನು ಸ್ಥಗಿತಗೊಳಿಸುವ ಮೊದಲು ಆ ಫಂಡ್‌ಗಳಲ್ಲಿ ಹೂಡಿಕೆ ಮಾಡಿದ ಶೇಕಡ 50ರಷ್ಟಕ್ಕಿಂತ ಹೆಚ್ಚಿನವರ ಒಪ್ಪಿಗೆ ಪಡೆಯುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಶೇಕಡ 50ಕ್ಕಿಂತ ಹೆಚ್ಚಿನ ಹೂಡಿಕೆದಾರರಿಂದ ಒಪ್ಪಿಗೆ ಪಡೆಯದೆಯೇ ಸಾಲಪತ್ರ ಆಧಾರಿತ ಆರು ಮ್ಯೂಚುವಲ್ ಫಂಡ್‌ ಯೋಜನೆಗಳನ್ನು ಸ್ಥಗಿತಗೊಳಿಸಿದ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದನ್ನು ಪ್ರಶ್ನಿಸಿ ಫ್ರ್ಯಾಂಕ್ಲಿನ್ ಟೆಂಪಲ್‌ಟನ್‌ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರು ಇದ್ದ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಿದೆ. ‘ನಾವು ಕಾನೂನಿನ ಅಂಶಗಳನ್ನು ವ್ಯಾಖ್ಯಾನಿಸಿದ್ದೇವೆ. ಸಾಲಪತ್ರ ಆಧಾರಿತ ಯೋಜನೆಗಳನ್ನು ಸ್ಥಗಿತಗೊಳಿಸುವ ಮೊದಲು ಹೂಡಿಕೆದಾರರಿಂದ ಬಹುಮತದ ಒಪ್ಪಿಗೆ ಪಡೆದುಕೊಳ್ಳಬೇಕು ಎಂಬ ಬಗ್ಗೆ ಹೈಕೋರ್ಟ್‌ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಒಪ್ಪಿದ್ದೇವೆ’ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT