ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19 ಸಾವಿರ ಸಿಬ್ಬಂದಿ ಕಡಿತ ಮಾಡಲಿರುವ ಆ್ಯಕ್ಸೆಂಚರ್‌

Last Updated 24 ಮಾರ್ಚ್ 2023, 19:23 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಆ್ಯಕ್ಸೆಂಚರ್‌ ಕಂಪನಿಯು 18 ತಿಂಗಳಿನಲ್ಲಿ 19 ಸಾವಿರ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದಾಗಿ ಹೇಳಿದೆ. ಇದು ಕಂಪನಿ ಹೊಂದಿರುವ ಒಟ್ಟು ಸಿಬ್ಬಂದಿಯಲ್ಲಿ ಶೇಕಡ 2.5ರಷ್ಟು.

ವೆಚ್ಚ ಕಡಿಮೆ ಮಾಡುವ ಭಾಗವಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂಪನಿ ತಿಳಿಸಿದೆ.

ಸಿಬ್ಬಂದಿ ಸಂಖ್ಯೆ ಕಡಿಮೆ ಮಾಡುವುದಕ್ಕೆ ಒಟ್ಟಾರೆ ₹ 12,300 ಕೋಟಿ ವೆಚ್ಚವಾಗಲಿದೆ ಎಂದು ಕಂಪನಿಯು ಅಮೆರಿಕದ ಸೆಕ್ಯುರಿಟಿ ಆ್ಯಂಡ್‌ ಎಕ್ಸ್‌ಚೇಂಜ್‌ ಕಮಿಷನ್‌ಗೆ ಮಾಹಿತಿ ನೀಡಿದೆ.

19 ಸಾವಿರದಲ್ಲಿ ಅರ್ಧದಷ್ಟು ಉದ್ಯೋಗ ಕಡಿತವು ಆಡಳಿತಾತ್ಮಕ ವಿಭಾಗದಲ್ಲಿ ಆಗಲಿದೆ ಎಂದು ಕಂಪನಿ ತಿಳಿಸಿದೆ. ಕಂಪನಿಯ ವಾರ್ಷಿಕ ವರದಿಯ ಪ್ರಕಾರ, 2022ರಲ್ಲಿ ಒಟ್ಟು 7.21 ಲಕ್ಷ ಸಿಬ್ಬಂದಿ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT