ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಬಿಐ ಮೇಲ್ವಿಚಾರಣೆಗೆ ಪಟ್ಟಣ ಸಹಕಾರಿ ಬ್ಯಾಂಕ್‌

ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಂಪುಟ ಸಮ್ಮತಿ
Last Updated 24 ಜೂನ್ 2020, 14:36 IST
ಅಕ್ಷರ ಗಾತ್ರ

ನವದೆಹಲಿ: ಎಲ್ಲ ಸಹಕಾರಿ ಬ್ಯಾಂಕ್‌ಗಳು ಶೀಘ್ರದಲ್ಲಿಯೇ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮೇಲ್ವಿಚಾರಣೆ ವ್ಯಾಪ್ತಿಗೆ ಒಳಪಡಲಿವೆ.

ಈ ನಿರ್ಧಾರವು ಸಹಕಾರಿ ಬ್ಯಾಂಕ್‌ಗಳ ಠೇವಣಿದಾರರಿಗೆ ಭಾರಿ ನೆಮ್ಮದಿ ನೀಡಲಿದೆ. ಸದ್ಯಕ್ಕೆ ವಾಣಿಜ್ಯ ಬ್ಯಾಂಕ್‌ಗಳಿಗೆ ಅನ್ವಯಿಸುವ ಆರ್‌ಬಿಐನ ಮೇಲ್ವಿಚಾರಣೆ ಪ್ರಕ್ರಿಯೆಯು ಇನ್ನು ಮುಂದೆ ಪಟ್ಟಣ ಸಹಕಾರಿ ಬ್ಯಾಂಕ್‌ ಮತ್ತು ಬಹು ರಾಜ್ಯ ವ್ಯಾಪ್ತಿಯ ಸಹಕಾರಿ ಬ್ಯಾಂಕ್‌ಗಳಿಗೂ ಅನ್ವಯವಾಗಲಿದೆ. ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

‘ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೊಂದು ಐತಿಹಾಸಿಕ ನಿರ್ಧಾರವಾಗಿದೆ. ಇದರಿಂದ ಠೇವಣಿದಾರರ ಹಣ ಸುರಕ್ಷಿತವಾಗಿರಲಿದೆ. ಅವರ ಹಿತಾಸಕ್ತಿ ರಕ್ಷಣೆಯಾಗಲಿದೆ’ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದ್ದಾರೆ.

ಹಲವಾರು ಸಹಕಾರಿ ಬ್ಯಾಂಕ್‌ಗಳಲ್ಲಿನ ಹಗರಣದಿಂದಾಗಿ ಲಕ್ಷಾಂತರ ಠೇವಣಿದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರ್‌ಬಿಐ ವಿಧಿಸಿದ ನಿರ್ಬಂಧಗಳ ಕಾರಣಕ್ಕೆ ಠೇವಣಿ ಹಣ ಹಿಂದೆ ಪಡೆಯಲು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವುಗಳನ್ನು ಆರ್‌ಬಿಐ ಮೇಲ್ವಿಚಾರಣೆ ವ್ಯಾಪ್ತಿಗೆ ತರುವ ನಿರ್ಧಾರವು ಮಹತ್ವದ್ದಾಗಿದೆ.

1482

ಪಟ್ಟಣ ಸಹಕಾರಿ ಬ್ಯಾಂಕ್‌ಗಳು

58

ಬಹು ರಾಜ್ಯ ಕಾರ್ಯವ್ಯಾಪ್ತಿಯ ಸಹಕಾರಿ ಬ್ಯಾಂಕ್‌ಗಳು

8.6 ಕೋಟಿ

ಠೇವಣಿದಾರರ ಸಂಖ್ಯೆ

₹ 4.85 ಲಕ್ಷ ಕೋಟಿ

ಒಟ್ಟಾರೆ ಉಳಿತಾಯ ಠೇವಣಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT