ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯ ವಲಯದ ಬೆಳವಣಿಗೆ 6 ತಿಂಗಳ ಕನಿಷ್ಠ

Last Updated 1 ಸೆಪ್ಟೆಂಬರ್ 2022, 11:03 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಎಂಟು ಪ್ರಮುಖ ಮೂಲಸೌಕರ್ಯ ವಲಯಗಳು ಜುಲೈನಲ್ಲಿ ಶೇ 4.5ರಷ್ಟು ಬೆಳವಣಿಗೆ ಕಂಡಿವೆ. ಹಿಂದಿನ ವರ್ಷದ ಜುಲೈಗೆ ಹೋಲಿಸಿದರೆ ಆರು ತಿಂಗಳ ಕನಿಷ್ಠ ಮಟ್ಟದ ಬೆಳವಣಿಗೆ ಇದಾಗಿದೆ. 2021ರ ಜುಲೈನಲ್ಲಿ ಈ ವಲಯಗಳ ಬೆಳವಣಿಗೆಯು ಶೇ 9.9ರಷ್ಟು ಇತ್ತು.

ರಸಗೊಬ್ಬರ, ಕಲ್ಲಿದ್ದಲು, ಸಿಮೆಂಟ್‌, ಉಕ್ಕು, ಸಂಸ್ಕರಣಾ ಉತ್ಪನ್ನಗಳು ಮತ್ತು ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಆದರೆ, ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಉತ್ಪಾದನೆ ಕ್ರಮವಾಗಿ ಶೇ 3.8 ಮತ್ತು ಶೇ 0.3ರಷ್ಟು ಇಳಿಕೆ ಆಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ.

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಜುಲೈ ಅವಧಿಯಲ್ಲಿಈ ಎಂಟು ವಲಯಗಳ ಬೆಳವಣಿಗೆ ಶೇ 11.5ರಷ್ಟು ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಶೇ 21.4ರಷ್ಟು ಬೆಳವಣಿಗೆ ಕಂಡುಬಂದಿತ್ತು.

ಕೆಲವು ವಲಯಗಳ ಬೆಳವಣಿಗೆಯು ಇನ್ನೂ ಕೋವಿಡ್‌ ಸಾಂಕ್ರಾಮಿಕದ ಮುಂಚಿನ ಮಟ್ಟಕ್ಕಿಂತಲೂ ಕಡಿಮೆ ಇದೆ. ಹೀಗಾಗಿ ಒಟ್ಟಾರೆ ಚೇತರಿಕೆಗೆ ಇನ್ನೂ ಹೆಚ್ಚಿನ ಸಮಯ ಹಿಡಿಯಲಿದೆ ಎಂದು ಇಂಡಿಯಾ ರೇಟಿಂಗ್ಸ್‌ ಸಂಸ್ಥೆಯು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT