ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಮುಖ ಕೈಗಾರಿಕಾ ವಲಯಗಳಲ್ಲಿ ಶೇ 11.6ರಷ್ಟು ಬೆಳವಣಿಗೆ

Last Updated 30 ಸೆಪ್ಟೆಂಬರ್ 2021, 15:48 IST
ಅಕ್ಷರ ಗಾತ್ರ

ನವದೆಹಲಿ: ಮೂಲಸೌಕರ್ಯ ವಲಯಗಳ ಪ್ರಮುಖ ಎಂಟು ಕೈಗಾರಿಕೆಗಳು ಆಗಸ್ಟ್‌ನಲ್ಲಿ ಶೇಕಡ 11.6ರಷ್ಟು ಬೆಳವಣಿಗೆ ಕಂಡಿವೆ. 2020ರ ಆಗಸ್ಟ್‌ನಲ್ಲಿ ಈ ಎಂಟು ವಲಯಗಳು ಶೇ (–)6.9ರಷ್ಟು ಇಳಿಕೆ ಕಂಡಿದ್ದವು.

ದೇಶದ ಕೈಗಾರಿಕಾ ಉತ್ಪಾದನೆ ಸೂಚ್ಯಂಕಕ್ಕೆ (ಐಐಪಿ) ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಸಂಸ್ಕರಣಾ ಉತ್ಪನ್ನಗಳು, ರಸಗೊಬ್ಬರ, ಉಕ್ಕು, ಸಿಮೆಂಟ್‌ ಮತ್ತು ವಿದ್ಯುತ್‌ ವಲಯಗಳು ಶೇ 40.27ರಷ್ಟು ಕೊಡುಗೆ ನೀಡುತ್ತಿವೆ.

ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ, ಕಳೆದ ವರ್ಷದ ಆಗಸ್ಟ್‌ಗೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ನಲ್ಲಿ ಕಲ್ಲಿದ್ದಲು, ನೈಸರ್ಗಿಕ ಅನಿಲ, ಸಂಸ್ಕರಣಾ ಉತ್ಪನ್ನಗಳು, ಉಕ್ಕು, ಸಿಮೆಂಟ್‌ ಮತ್ತು ವಿದ್ಯುತ್‌ ವಲಯಗಳ ಉತ್ಪಾದನೆ ಹೆಚ್ಚಾಗಿದೆ. ಇನ್ನೊಂದೆಡೆ ಕಚ್ಚಾ ತೈಲ ಮತ್ತು ರಸಗೊಬ್ಬರ ಕೈಗಾರಿಕೆಗಳ ಉತ್ಪಾದನೆ ಇಳಿಕೆ ಆಗಿದೆ.‌

ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲದ ಉತ್ಪಾದನೆಯು ಕಳೆದ ಬಾರಿಯ ಆಗಸ್ಟ್‌ಗೆ ಹೋಲಿಸಿದರೆ ಈ ಬಾರಿಯ ಆಗಸ್ಟ್‌ನಲ್ಲಿ ಶೇ 20.6ರಷ್ಟು ಬೆಳವಣಿಗೆ ಕಂಡಿದೆ. ಸಿಮೆಂಟ್ ಉತ್ಪಾದನೆಯು ಶೇ 36.3ರಷ್ಟು, ಉಕ್ಕು ಉತ್ಪಾದನೆಯು ಶೇ 5.1ರಷ್ಟು ಏರಿಕೆ ಆಗಿದೆ.

ಈ ಎಂಟು ವಲಯಗಳಿಗೆ ಸೇರಿದ ಕೈಗಾರಿಕೆಗಳ ಉತ್ಪಾದನೆಯಲ್ಲಿನ ಬೆಳವಣಿಗೆಯು ಏಪ್ರಿಲ್‌ನಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಶೇ 19.3 ಆಗಿದೆ. ಹಿಂದಿನ ವರ್ಷದ ಏಪ್ರಿಲ್‌–ಆಗಸ್ಟ್‌ ಅವಧಿಯಲ್ಲಿ ಈ ವಲಯದಲ್ಲಿ ಶೇ (–)17.3ರಷ್ಟು ಇಳಿಕೆ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT