ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋವಿಡ್‌–19’:ಜಾಗತಿಕ ಆರ್ಥಿಕತೆಚೇತರಿಕೆಗೆ ದೊಡ್ಡ ಪೆಟ್ಟು: ಐಎಂಎಫ್‌

Last Updated 24 ಫೆಬ್ರುವರಿ 2020, 19:30 IST
ಅಕ್ಷರ ಗಾತ್ರ

ರಿಯಾದ್‌ : ವಿಶ್ವದಾದ್ಯಂತ ಸಾಂಕ್ರಾಮಿಕವಾಗಿ ಹಬ್ಬುತ್ತಿರುವ ಮಾರಣಾಂತಿಕ ಕೊರೊನಾ ವೈರಸ್‌ (ಕೋವಿಡ್‌–19), ನಾಜೂಕಿನ ಸ್ಥಿತಿಯಲ್ಲಿ ಇರುವ ಜಾಗತಿಕ ಆರ್ಥಿಕತೆ ಚೇತರಿಕೆಯನ್ನು ಇನ್ನಷ್ಟು ಗಂಡಾಂತರಕ್ಕೆ ದೂಡಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಎಚ್ಚರಿಸಿದೆ.

‘ಜಾಗತಿಕ ಆರ್ಥಿಕ ವೃದ್ಧಿ ದರವು ಹಿಂದಿನ ವರ್ಷದ ಶೇ 2.9ಕ್ಕೆ ಹೋಲಿಸಿದರೆ ಈ ವರ್ಷ ಶೇ 3.3ರಷ್ಟು ಚೇತರಿಕೆ ದಾಖಲಿಸಲಿದೆ ಎಂದು ಅಂದಾಜಿಸಲಾಗಿದೆ. ಈ ವೃದ್ಧಿ ದರದ ಅಂದಾಜು ಕೂಡ ಆಶಾದಾಯಕವಾಗಿಲ್ಲ. ‘ಕೋವಿಡ್‌–19’ ವೈರಸ್‌ ಹಾವಳಿಯು ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸಿದೆ. ಹೀಗಾಗಿ ಜಾಗತಿಕ ಆರ್ಥಿಕ ಚೇತರಿಕೆಯು ಗಂಡಾಂತರದಲ್ಲಿ ಸಿಲುಕಿದೆ’ ಎಂದು ಐಎಂಎಫ್‌ ಮುಖ್ಯಸ್ಥೆ ಕ್ರಿಸ್ಟಲಿನಾ ಜೋರ್ಜಿವಾ ಹೇಳಿದ್ದಾರೆ.

ಇಲ್ಲಿ ನಡೆದ ‘ಜಿ–20’ ದೇಶಗಳ ಹಣಕಾಸು ಸಚಿವರ ಮತ್ತು ಕೇಂದ್ರೀಯ ಬ್ಯಾಂಕ್‌ಗಳ ಗವರ್ನರ್‌ಗಳ ಸಭೆಯ ಕೊನೆಯಲ್ಲಿ ಅವರು ಈ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT