ಶನಿವಾರ, ಮಾರ್ಚ್ 28, 2020
19 °C

ಭಾರತದ ಆರ್ಥಿಕ ಹಿನ್ನಡೆಗೆ ಕಾರಣವಾಗಬಹುದು ಕೋವಿಡ್‌–19: ಆರ್‌ಬಿಐ ಗವರ್ನರ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19 ಭಾರತದ ಆರ್ಥಿಕ ಹಿನ್ನಡೆಗೆ ಕಾರಣವಾಬಹುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅಭಿಪ್ರಾಯಪಟ್ಟಿದ್ದಾರೆ. 

ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಸೋಮವಾರ ಮಾತನಾಡಿರುವ ಅವರು, ‘ಕೊರೊನಾ ವೈರಸ್‌ ಮಹಾಮಾರಿಗೆ ಭಾರತ ಪ್ರತಿರೋಧಕ ಗುಣ ಹೊಂದಿಲ್ಲ. ಹೀಗಾಗಿ ದೇಶದಲ್ಲಿ ಈಗಾಗಲೇ 100ಕ್ಕೂ ಅಧಿಕ ಮಂದಿಗೆ ಸೋಂಕು ಉಂಟಾಗಿದೆ. ಇದರ ವಿರುದ್ಧ ಭಾರತ ಯುದ್ಧೋಪಾದಿಯಲ್ಲಿ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಭಾರತದ ವಾಣಿಜ್ಯ ಚಟುವಟಿಕೆ ಚೀನಾದೊಂದಿಗೆ ಹೆಚ್ಚಾಗಿ ಬೆಸೆದುಕೊಂಡಿದೆ. ಹೀಗಾಗಿ ಕೋವಿಡ್‌ ಭಾರತದ ಮೇಲೆ ನೇರವಾಗಿ ಪರಿಣಾಮ ಬೀರಬಲ್ಲದು,’ ಎಂದು ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ. 

‘ಮಹಾಮಾರಿಯ ಎರಡನೇ ಹಂತದ ಪರಿಣಾಮಗಳು ಆಂತರಿಕ ಬೆಳವಣಿಗೆಯ ಕುಸಿತದೊಂದಿಗೆ ಕಾಣಿಸುತ್ತವೆ.  ಅಲ್ಲದೆ, ಇದು ಜಾಗತಿಕ ಆರ್ಥಿಕತೆಯನ್ನು ಕುಂಠಿತಗೊಳಿಸುತ್ತದೆ. ಇದರ ಪರಿಣಾಮವಾಗಿ ಭಾರತದ ಸದ್ಯದ ಆರ್ಥಿಕತೆಯ ಮೇಲೂ ಪರಿಣಾಮಗಳು ಬೀರುತ್ತವೆ,’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು