ನವದೆಹಲಿ: 2023–24ನೇ ಹಣಕಾಸು ವರ್ಷದಲ್ಲಿ ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡಿದ ತೆರಿಗೆ ಪ್ರಯೋಜನಗಳ ಕಾರಣದಿಂದಾಗಿ ಕೇಂದ್ರ ಸರ್ಕಾರವು ಅಂದಾಜು ₹99 ಸಾವಿರ ಕೋಟಿ ವರಮಾನವನ್ನು ಬಿಟ್ಟುಕೊಟ್ಟಿದೆ.

ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಮಂಗಳವಾರ ಈ ವಿಷಯವನ್ನು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. 2016ರ ನಂತರದಲ್ಲಿ ಕಾರ್ಪೊರೇಟ್ ತೆರಿಗೆಯನ್ನು ಹಂತ ಹಂತವಾಗಿ ಕಡಿಮೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರವು ಬಿಟ್ಟುಕೊಟ್ಟಿರುವ ಕಾರ್ಪೊರೇಟ್ ತೆರಿಗೆ ವರಮಾನದ ಮೊತ್ತವು 2022–23ರಲ್ಲಿ ₹88,109 ಕೋಟಿ, 2021–22ರಲ್ಲಿ ₹96,892 ಆಗಿದೆ ಎಂದು ಅವರು ಹೇಳಿದ್ದಾರೆ. ಎಎಪಿ ಸದಸ್ಯ ರಾಘವ ಛಡ್ಡಾ ಅವರ ಪ್ರಶ್ನೆಗೆ ಉತ್ತರವಾಗಿ ಸಚಿವರು ಈ ವಿವರ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.