ಕಾರ್ಪೊರೇಟ್ ತೆರಿಗೆ ಸಂಗ್ರಹ ಹೆಚ್ಚಳ

ನವದೆಹಲಿ: ಕಾರ್ಪೊರೇಟ್ ತೆರಿಗೆ ಸಂಗ್ರಹವು 2021–22ರಲ್ಲಿ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಶೇಕಡ 3ರಷ್ಟನ್ನು ಮೀರಿದೆ. ಎರಡು ವರ್ಷಗಳ ನಂತರ ಈ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಆಗಿದೆ.
2021–22ರಲ್ಲಿ ಕಾರ್ಪೊರೇಟ್ ತೆರಿಗೆ ಸಂಗ್ರಹವು ₹ 7.12 ಲಕ್ಷ ಕೋಟಿ ಆಗಿದೆ. ಸದ್ಯದ ಮಾರುಕಟ್ಟೆ ದರದಲ್ಲಿ ಸರಾಸರಿ ಜಿಡಿಪಿಯು ₹ 236.64 ಲಕ್ಷ ಕೋಟಿ ಇದೆ. ಇದರಿಂದಾಗಿ ಜಿಡಿಪಿಗೆ ಕಾರ್ಪೊರೇಟ್ ತೆರಿಗೆ ಪ್ರಮಾಣವು ಶೇ 3.01ರಷ್ಟು ಆಗಿದೆ.
ಸರಕು ಮತ್ತು ಸೇವೆಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಭಾರತದ ಕಂಪನಿಗಳ ಲಾಭದಲ್ಲಿ ಸುಧಾರಣೆ ಕಂಡುಬಂದಿದೆ. ಹೀಗಾಗಿ ತೆರಿಗೆ ಸಂಗ್ರಹ ಹೆಚ್ಚಾಗಿದೆ. ಆದರೆ 2018–19ರಲ್ಲಿ ಕಾರ್ಪೊರೇಟ್ ತೆರಿಗೆ ಸಂಗ್ರಹವು ಜಿಡಿಪಿಯ ಶೇ 3.51ರಷ್ಟು (₹ 6.63 ಲಕ್ಷ ಕೋಟಿ) ಐದು ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿತ್ತು.
ಪ್ರಸಕ್ತ ಹಣಕಾಸು ವರ್ಷದಲ್ಲಿ ಕಾರ್ಪೊರೇಟ್ ತೆರಿಗೆ ಸಂಗ್ರಹವು ₹ 7.20 ಲಕ್ಷ ಕೋಟಿ (ಮರುಪಾವತಿಗೂ ಮುನ್ನ) ಆಗುವ ಅಂದಾಜು ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.