ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಬಿಕ್ಕಟ್ಟು: ₹ 10 ಸಾವಿರ ಕೋಟಿ ನೆರವು ಕೋರಿದ ಎನ್‌ಬಿಎಫ್‌ಸಿ

Last Updated 12 ಜುಲೈ 2020, 19:00 IST
ಅಕ್ಷರ ಗಾತ್ರ

ನವದೆಹಲಿ: ವಿಶೇಷ ನಗದು ಯೋಜನೆಯಡಿ ₹ 10 ಸಾವಿರ ಕೋಟಿ ನೆರವು ನೀಡುವಂತೆ ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ) ಮತ್ತು ಗೃಹ ಹಣಕಾಸು ಸಂಸ್ಥೆಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ನೆರವಾಗಲು ಜುಲೈ 1ರಂದು ಈ ಯೋಜನೆ ಜಾರಿಗೊಳಿಸಲಾಗಿತ್ತು. ಕೇಂದ್ರ ಸರ್ಕಾರದ ವಿಶೇಷ ಸಾಲಪತ್ರಗಳ ಖಾತರಿಯ ಮೇಲೆ ಆರ್‌ಬಿಐ ನೆರವು ನೀಡಲಿದೆ.

ಎಸ್‌ಬಿಐ ಕ್ಯಾಪಿಟಲ್‌ ಮಾರ್ಕೇಟ್‌ ಲಿಮಿಟೆಡ್‌ (ಎಸ್‌ಬಿಐಸಿಎಪಿ) ನಿರ್ಮಿಸಿರುವ ಟ್ರಸ್ಟ್‌ ಈ ಸಾಲಪತ್ರಗಳನ್ನು ನೀಡಲಿದೆ.

₹ 9,875 ಕೋಟಿ ನೆರವು ನೀಡುವಂತೆ ‘ಎಸ್‌ಬಿಐ ಸಿಎಪಿ’ಗೆ ಜುಲೈ 7ರಂದು 24 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೊದಲು ಬಂದ ಅರ್ಜಿಗಳಿಗೆ ಒಪ್ಪಿಗೆ ನೀಡಿದ್ದು, ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ ಎಂದೂ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT