ಶುಕ್ರವಾರ, ನವೆಂಬರ್ 27, 2020
23 °C

ಚಿನ್ನದ ಸಾಲಕ್ಕೆ ಬೇಡಿಕೆ ಹೆಚ್ಚಲಿದೆ: ಡಬ್ಲ್ಯುಜಿಸಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಕೋವಿಡ್–19 ಸಾಂಕ್ರಾಮಿಕದಿಂದಾಗಿ ಚಿನ್ನದ ಸಾಲಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. 2020–21ರಲ್ಲಿ ₹ 4.05 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆ ಇದೆ ಎಂದು ವಿಶ್ವ ಚಿನ್ನ ಸಮಿತಿ (ಡಬ್ಲ್ಯುಜಿಸಿ) ಹೇಳಿದೆ.

ಬ್ಯಾಂಕ್‌ಗಳು ಮತ್ತು ಬ್ಯಾಂಕೇತರ ಹಣಕಾಸು ಕಂಪನಿಗಳಲ್ಲಿ (ಎನ್‌ಬಿಎಫ್‌ಸಿ) ಚಿನ್ನದ ಸಾಲಕ್ಕೆ ಬೇಡಿಕೆ ಬರುತ್ತಿದೆ. 2019–20ರಲ್ಲಿ ಚಿನ್ನದ ಸಾಲದ ಒಟ್ಟಾರೆ ಮೊತ್ತ ₹ 3.44 ಲಕ್ಷ ಕೋಟಿ ಇತ್ತು. 2020–21ರಲ್ಲಿ ₹ 4.05 ಲಕ್ಷ ಕೋಟಿಗೆ ಏರಿಕೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಿದೆ.

ಸಣ್ಣ ಉದ್ಯಮಗಳು ಹಾಗೂ ಕುಟುಂಬದ ತುರ್ತು ಅಗತ್ಯಗಳಿಗೆ ಚಿನ್ನದ ಸಾಲವು ಬಹಳ ಮುಖ್ಯವಾದ ಆಧಾರವಾಗಿದೆ ಎಂದು ಸಮಿತಿಯ ಭಾರತದ ವ್ಯವಸ್ಥಾಪಕ ನಿರ್ದೇಶಕ ಸೋಮಸುಂದರಂ ಪಿ.ಆರ್. ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು