ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಪರಿಣಾಮ ಕಚ್ಚಾ ತೈಲ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮಂಗಳವಾರದ ವಹಿವಾಟಿನಲ್ಲಿ ಪ್ರತಿ ಬ್ಯಾರೆಲ್ ₹10,044ಕ್ಕೆ ತಲುಪುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ.

ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ ಜೂನ್ ತಿಂಗಳಿಗೆ ವಿತರಿಸಿದ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ ಎಂದು ವರದಿಗಳು ತಿಳಿಸಿವೆ.

ಸೋಮವಾರ ಅಂತ್ಯಕ್ಕೆ ಕಚ್ಚಾ ತೈಲ ದರ ₹9,924ಕ್ಕೆ ಮುಕ್ತಾಯಗೊಂಡಿತ್ತು. ಆದರೆ ಮಂಗವಾರ ಕೂಡ ತೈಲ ಬೆಲೆ ಏರಿಕೆ ಕಂಡು ಬ್ಯಾರೆಲ್ಗೆ ₹10,044ಕ್ಕೆ ತಲುಪಿದೆ.

ಹೂಡಿಕೆದಾರರು ಮತ್ತು ವ್ಯಾಪಾರಿಗಳು ಹೊಸದಾಗಿ ಖರೀದಿ ಪ್ರಕ್ರಿಯೆಗೆ ಮುಂದಾಗುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.