ಮಂಗಳವಾರ, ನವೆಂಬರ್ 24, 2020
22 °C

ಜಿಎಸ್‌ಟಿ ವಾರ್ಷಿಕ ರಿಟರ್ನ್ಸ್‌ ಸಲ್ಲಿಕೆ ಗಡುವು ಡಿಸೆಂಬರ್ 31ರವರೆಗೆ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): 2018–19ನೇ ಹಣಕಾಸು ವರ್ಷಕ್ಕೆ ಜಿಎಸ್‌ಟಿ ವಾರ್ಷಿಕ ರಿಟರ್ನ್ಸ್‌ (ಜಿಎಸ್‌ಟಿಆರ್‌–9) ಸಲ್ಲಿಕೆ ಅವಧಿಯನ್ನು ಡಿಸೆಂಬರ್‌ 31ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಸರ್ಕಾರದ ಈ ಹಿಂದಿನ ಆದೇಶದ ಪ್ರಕಾರ, ಇದೇ ತಿಂಗಳ 31ರ ಒಳಗಾಗಿ ಜಿಎಸ್‌ಟಿ ವಾರ್ಷಿಕ ರಿಟರ್ನ್ಸ್‌ ಸಲ್ಲಿಸಬೇಕಿತ್ತು.

ಜಿಎಸ್‌ಟಿಆರ್‌–9 ಮತ್ತು ಜಿಎಸ್‌ಟಿಆರ್‌–9ಸಿ ಸಲ್ಲಿಸಲು ಇನ್ನೂ ಹೆಚ್ಚಿನ ಕಾಲಾವಕಾಶ ನೀಡುವಂತೆ ಉದ್ಯಮ ವಲಯವು ಸರ್ಕಾರಕ್ಕೆ ಮನವಿ ಮಾಡಿತ್ತು. ಲಾಕ್‌ಡೌನ್‌ ನಿರ್ಬಂಧಗಳಿಂದಾಗಿ ದೇಶದ ಹಲವು ಭಾಗಗಳಲ್ಲಿ ಇನ್ನೂ ವಾಣಿಜ್ಯ– ವಹಿವಾಟು ಸಹಜ ಸ್ಥಿತಿಗೆ ಬಂದಿಲ್ಲ. ಹೀಗಾಗಿ ಅವಧಿ ವಿಸ್ತರಿಸುವಂತೆ ಕೋರಿತ್ತು ಎಂದು ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್‌ನ ಕೇಂದ್ರೀಯ ಮಂಡಳಿಯು (ಸಿಬಿಐಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.