ಭಾನುವಾರ, ನವೆಂಬರ್ 1, 2020
19 °C

ಡೆಟ್‌ ಮ್ಯೂಚುವಲ್‌ ಫಂಡ್‌: ₹ 51,900 ಕೋಟಿ ಹೊರಹರಿವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹೂಡಿಕೆದಾರರು ಡೆಟ್‌ ಮ್ಯೂಚುವಲ್‌ ಫಂಡ್‌ ಯೋಜನೆಗಳಿಂದ ಸೆಪ್ಟೆಂಬರ್‌ನಲ್ಲಿ ₹ 51,900 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ. ಇದರಿಂದಾಗಿ ಸತತ ಎರಡನೇ ತಿಂಗಳಿನಲ್ಲಿಯೂ ಹೂಡಿಕೆದಾರರು ಬಂಡವಾಳ ಹಿಂದಕ್ಕೆ ಪಡೆದಂತಾಗಿದೆ.

ಆಗಸ್ಟ್‌ನಲ್ಲಿ ₹ 3,907 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದರು ಎಂದು ಭಾರತೀಯ ಮ್ಯೂಚುವಲ್‌ ಫಂಡ್‌ ಸಂಸ್ಥೆಗಳ ಒಕ್ಕೂಟ (ಎಎಂಎಫ್‌ಐ) ತಿಳಿಸಿದೆ.

ಏಪ್ರಿಲ್‌ನಿಂದ ಜುಲೈವರೆಗೆ ಹೂಡಿಕೆ ಮಾಡಿದ್ದರು. ಏಪ್ರಿಲ್‌ನಲ್ಲಿ ₹ 43,431 ಕೋಟಿ, ಮೇನಲ್ಲಿ ₹ 63,665 ಕೋಟಿ, ಜೂನ್‌ನಲ್ಲಿ ₹ 2,862 ಕೋಟಿ ಹಾಗೂ ಜುಲೈನಲ್ಲಿ ₹ 91,392 ಕೋಟಿ ಹೂಡಿಕೆ ಆಗಿತ್ತು.

ನಿಶ್ಚಿತ ಆದಾಯ ಬರುವ ಹೂಡಿಕೆ ಆಯ್ಕೆಗಳ ಬಗ್ಗೆ ಹೂಡಿಕೆದಾರರು  ಹೆಚ್ಚು ಗಮನ ನೀಡುತ್ತಿದ್ದಾರೆ ಎಂದು ಮಾರ್ನಿಂಗ್‌ಸ್ಟಾರ್‌ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ನಿರೀಕ್ಷೆಯಂತೆಯೇ ತ್ರೈಮಾಸಿಕದ ಅಂತ್ಯದಲ್ಲಿ ಬಂಡವಾಳ ಹೊರಹರಿವು ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ.

ಡೆಟ್‌ ಮ್ಯೂಚುವಲ್‌ ಫಂಡ್‌ಗಳ ನಿರ್ವಹಣಾ ಸಂಪತ್ತು ಮೌಲ್ಯ ₹ 12.14 ಲಕ್ಷ ಕೋಟಿಗಳಿಗೆ ತಲುಪಿದೆ. ಆಗಸ್ಟ್‌ ಅಂತ್ಯಕ್ಕೆ ₹ 12.61 ಲಕ್ಷ ಕೋಟಿ ಇತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು