ಸೋಮವಾರ, ಅಕ್ಟೋಬರ್ 26, 2020
27 °C

ಮುಂದೂಡಲಾದ ಸಾಲದ ಕಂತಿಗೆ ಬಡ್ಡಿ: ಶೀಘ್ರ ತೀರ್ಮಾನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾಲದ ಮುಂದೂಡಲಾಗಿರುವ ಮರುಪಾವತಿ ಕಂತುಗಳಿಗೆ ಚಕ್ರಬಡ್ಡಿ ವಿಧಿಸುವ ಮತ್ತು ಮರುಪಾವತಿ ವಿಳಂಬ ಮಾಡಿದವರ ಕ್ರೆಡಿಟ್‌ ರೇಟಿಂಗ್‌ ಬದಲಿಸುವ ವಿಚಾರವಾಗಿ ಎರಡು ಮೂರು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರವು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ವಿಚಾರವಾಗಿ ತನ್ನ ನಿರ್ಧಾರವನ್ನು ತಿಳಿಸುವಂತೆ ಮತ್ತು ಪ್ರಮಾಣಪತ್ರದ ಪ್ರತಿಯನ್ನು ಅರ್ಜಿದಾರರ ಪರ ವಕೀಲರಿಗೂ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ಸೂಚಿಸಿದೆ.

‘ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ತೀರ್ಮಾನ ಕೈಗೊಳ್ಳುವ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ. ಹಲವು ಆರ್ಥಿಕ ಪರಿಣಾಮಗಳ ಕಡೆಗೆ ಸರ್ಕಾರ ಗಮನ ಹರಿಸುತ್ತಿದೆ. ಅಕ್ಟೋಬರ್‌ 1ರ ವೇಳೆಗೆ ಈ ಕುರಿತ ಪ್ರಮಾಣಪತ್ರವನ್ನು ಸಲ್ಲಿಸಲಾಗುವುದು. ಅದರ ಪ್ರತಿಗಳನ್ನು ಇ–ಮೇಲ್‌ ಮೂಲಕ ಅರ್ಜಿದಾರರಿಗೆ ಕಳುಹಿಸಲಾಗುವುದು’ ಎಂದು ಸರ್ಕಾರದ ಪರವಾಗಿ ಹಾಜ‌ರಾಗಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಕೋರ್ಟ್‌ಗೆ ತಿಳಿಸಿದರು.

ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 5ರಂದು ನಡೆಸಲಾಗುವುದು ಎಂದು ತಿಳಿಸಿದ ಕೋರ್ಟ್‌, ಅದಕ್ಕೂ ಮೊದಲು ಪ್ರಮಾಣಪತ್ರದ ಪ್ರತಿಯನ್ನು ಅರ್ಜಿದಾರರ ಪರ ವಕೀಲರಿಗೆ ನೀಡುವಂತೆ ಸೂಚಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು