ನವದೆಹಲಿ: ವಿದೇಶಗಳಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ಭಾರತದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ 642 ಆನ್ಲೈನ್ ಗೇಮಿಂಗ್ ಕಂಪನಿಗಳನ್ನು ಕೇಂದ್ರ ಜಿಎಸ್ಟಿ ಗುಪ್ತಚರ ಮಹಾ ನಿರ್ದೇಶನಾಲಯವು (ಡಿಜಿಜಿಐ) ಪತ್ತೆ ಹಚ್ಚಿದೆ ಎಂದು ಕೇಂದ್ರ ಸರ್ಕಾರ, ಸೋಮವಾರ ಸಂಸತ್ಗೆ ತಿಳಿಸಿದೆ.

ಈ ಕಂಪನಿಗಳ ವಿರುದ್ಧ ಜಿಎಸ್ಟಿ ವಂಚನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಆದರೆ, ಕೆಲವು ಕಂಪನಿಗಳು ತನಿಖೆಗೆ ಸ್ಪಂದಿಸುತ್ತಿಲ್ಲ. ಐಜಿಎಸ್ಟಿ ಕಾಯ್ದೆ 2017ರ ಸೆಕ್ಷನ್ 14ಎ(3) ಅಡಿ ಅಂತಹ ಕಂಪನಿಗಳ ಯುಆರ್ಎಲ್/ ವೆಬ್ಸೈಟ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ತಿಳಿಸಲಾಗಿದೆ ಎಂದು ವಿವರಿಸಿದೆ.

ಈ ಕಂಪನಿಗಳ ವಿರುದ್ಧ ಕ್ರಮಕ್ಕೆ ಸಂಬಂಧಿಸಿದಂತೆ ವಿದೇಶಿ ಸರ್ಕಾರಗಳ ಜೊತೆಗೆ ಡಿಜಿಜಿಐ ಯಾವುದೇ ಸಂವಹನ ನಡೆಸಿಲ್ಲ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.