ನವದೆಹಲಿ:ಮೌಲ್ಯವರ್ಧಿತ ತೆರಿಗೆಯಲ್ಲಿನ ಹೆಚ್ಚಳವನ್ನು ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹಿಂಪಡೆದ ಕಾರಣ, ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ದರದಲ್ಲಿ ₹ 8.36ರಷ್ಟು ಕಡಿತ ಆಗಲಿದೆ.
ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇಕಡ 30ರಿಂದ ಶೇಕಡ 16.75ಕ್ಕೆ ಇಳಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಪ್ರಕಟಿಸಿದರು. ‘ಈ ತೀರ್ಮಾನದ ಪರಿಣಾಮವಾಗಿ, ಆರ್ಥಿಕವಾಗಿ ಚೇತರಿಸಿಕೊಳ್ಳಲು ನಗರಕ್ಕೆ ಸಹಾಯವಾಗುತ್ತದೆ’ ಎಂದು ಕೇಜ್ರಿವಾಲ್ ಹೇಳಿದರು.
ತೆರಿಗೆಯಲ್ಲಿನ ಕಡಿತವು ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಇದರಿಂದಾಗಿ ದೆಹಲಿಯಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ ₹ 73.64 ಆಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.