ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹24.5 ಲಕ್ಷ ಕೋಟಿಗೆ ಡಿಜಿಟಲ್ ಉದ್ಯಮ ವಹಿವಾಟು ಗುರಿ: ಅಶ್ವತ್ಥನಾರಾಯಣ

Last Updated 20 ಆಗಸ್ಟ್ 2021, 20:15 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯದ ಡಿಜಿಟಲ್ ಉದ್ಯಮದ ವಹಿವಾಟು 2025ರ ವೇಳೆಗೆ ₹ 24.5 ಲಕ್ಷ ಕೋಟಿ ತಲುಪ
ಬೇಕೆಂಬ ಗುರಿ ಇದೆ’ ಎಂದು ಐ.ಟಿ., ಬಿ.ಟಿ. ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ಸಿಲ್ವರ್ ಸ್ಪಿರಿಟ್ ಟೆಕ್ನಾಲಜಿ ಪಾರ್ಕ್‌ನಲ್ಲಿ ಶುಕ್ರವಾರ ‘ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್’ನ ಮೈಸೂರು ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

‘ಭಾರತದ ಡಿಜಿಟಲ್ ಉದ್ಯಮದ ವಹಿವಾಟು ₹ 74 ಲಕ್ಷ ಕೋಟಿ ಆಗಬೇಕೆಂಬು ಪ್ರಧಾನಿ ಗುರಿಗೆ ಪೂರಕವಾಗಿ ರಾಜ್ಯದ ವಹಿವಾಟನ್ನೂ ಹೆಚ್ಚಿಸಲು ಪ್ರಯತ್ನಿಸಲಾಗುವುದು’ ಎಂದರು.

‘ಡಿಜಿಟಲ್‌ ಎಕಾನಮಿ ಮಿಷನ್‌ ಮೂಲಕ ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗದಂಥ 2ನೇ ಹಂತದ ನಗರಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT