ಬೆಂಗಳೂರು: ‘ಡಿಜಿಟಲ್ ವಹಿವಾಟು ನಡೆಸುವಾಗ ಗ್ರಾಹಕರು ಎಚ್ಚರಿಕೆಯಿಂದ ಇರಬೇಕು’ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ನ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಹೇಳಿದರು.

ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಚ್ 15ರವರೆಗೆ ಡಿಜಿಟಲ್ ಪಾವತಿ ಜಾಗೃತಿ ಸಪ್ತಾಹವನ್ನು ಆಯೋಜಿಸಿದೆ. ಈ ಅಭಿಯಾನದ ಭಾಗವಾಗಿ ಬ್ಯಾಂಕ್ ಹಮ್ಮಿಕೊಂಡಿರುವ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸಿನ್ಹಾ ಅವರು ಮಾತನಾಡಿದರು.

ಸುರಕ್ಷಿತವಾದ ಡಿಜಿಟಲ್ ಬ್ಯಾಂಕಿಂಗ್ ವಿಧಾನಗಳ ಬಗ್ಗೆ ಗ್ರಾಹಕರಿಗೆ ಶಿಕ್ಷಣ ನೀಡುವ ಅಗತ್ಯವಿದೆ. ಒಟಿಪಿಯನ್ನು ಹಂಚಿಕೊಳ್ಳಬಾರದು, ಅಪರಿಚಿತ ಲಿಂಕ್ಗಳನ್ನು ಒತ್ತಬಾರದು, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಸೈಬರ್ ವಂಚನೆಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.

ಡಿಜಿಟಲ್ ವಂಚನೆ ತಡೆಗಟ್ಟುವಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಗೃತಿ ವಾಹನಕ್ಕೆ ಸಿನ್ಹಾ ಅವರು ಇದೇ ವೇಳೆ ಚಾಲನೆ ನೀಡಿದರು. ಈ ವಾಹನವು ಬೆಂಗಳೂರಿನಾದ್ಯಂತ ಸಂಚರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.