ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕ ತೆರಿಗೆ ಸಂಗ್ರಹ : ಸಿಬಿಡಿಟಿ ಅಧ್ಯಕ್ಷ ಸುಶೀಲ್‌ ಚಂದ್ರ ವಿಶ್ವಾಸ

Last Updated 17 ಸೆಪ್ಟೆಂಬರ್ 2018, 17:22 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಬಜೆಟ್‌ ನಿರೀಕ್ಷೆಯನ್ನೂ ಮೀರಿ ನೇರ ತೆರಿಗೆ ಸಂಗ್ರಹವಾಗುವ ವಿಶ್ವಾಸವಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷ (ಸಿಬಿಡಿಟಿ) ಸುಶೀಲ್‌ ಚಂದ್ರ ತಿಳಿಸಿದ್ದಾರೆ.

2018–19ರ ಬಜೆಟ್‌ನಲ್ಲಿ ₹ 11.5 ಕೋಟಿ ತೆರಿಗೆ ಸಂಗ್ರಹವಾಗುವ ಅಂದಾಜು ಮಾಡಲಾಗಿತ್ತು. ಆ ಗುರಿಯನ್ನೂ ಮೀರಿ ತೆರಿಗೆ ಸಂಗ್ರಹವಾಗಲಿದೆ ಎಂದು ಹೇಳಿದ್ದಾರೆ.

2017–18ರಲ್ಲಿ ನೇರ ತೆರಿಗೆ ಮೂಲಕ ₹ 10.03 ಲಕ್ಷ ಕೋಟಿ ಸಂಗ್ರಹವಾಗಿತ್ತು. ಏಪ್ರಿಲ್‌–ಜೂನ್‌ನಲ್ಲಿ ₹ 1.54 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದ್ದು ಶೇ 4.2 ರಷ್ಟು ಪ್ರಗತಿ ಕಂಡಿದೆ ಎಂದು ಲೆಕ್ಕಪತ್ರಗಳ ಮಹಾನಿಯಂತ್ರಕರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT