ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾಲರ್‌ ಇಂಡಸ್ಟ್ರೀಸ್‌ ವರಮಾನ ಶೇ 77ರಷ್ಟು ವೃದ್ಧಿ

Last Updated 11 ಆಗಸ್ಟ್ 2022, 14:01 IST
ಅಕ್ಷರ ಗಾತ್ರ

ಬೆಂಗಳೂರು: ಡಾಲರ್ ಇಂಡಸ್ಟ್ರೀಸ್ ಲಿಮಿಟೆಡ್‌ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿ ₹ 363.99 ಕೋಟಿ ವರಮಾನ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 205.49 ಕೋಟಿ ವರಮಾನ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ವರಮಾನದಲ್ಲಿ ಶೇಕಡ 77.13ರಷ್ಟು ಬೆಳವಣಿಗೆ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

ತೆರಿಗೆ ನಂತರದ ಲಾಭವು ಶೇ 7.66ರಷ್ಟು ಹೆಚ್ಚಾಗಿ ₹ 27.87 ಕೋಟಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ತೆರಿಗೆ ನಂತರದ ಲಾಭವು ₹ 23.11 ಕೋಟಿ ಇತ್ತು ಎಂದು ಮಾಹಿತಿ ನೀಡಿದೆ.

ವರಮಾನ ಮತ್ತು ಪ್ರಮಾಣದ ದೃಷ್ಟಿಯಿಂದ ಕಂಪನಿಯು ಉತ್ತಮ ಸಾಧನೆ ಮಾಡಿದೆ ಎನ್ನುವುದನ್ನು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದ ಅಂಕಿ–ಅಂಶಗಳು ಸೂಚಿಸುತ್ತಿವೆ ಎಂದು ಡಾಲರ್ ಇಂಡಸ್ಟ್ರೀಸ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿನೋದ್‌ ಕುಮಾರ್‌ ಗುಪ್ತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT