ನವದೆಹಲಿ: ‘ಕೆಲವು ಕಂಪನಿಗಳು ಅವಶ್ಯಕತೆ ಇಲ್ಲದಿದ್ದರೂ ಸಾಲ ಮರುಪಾವತಿ ಮುಂದೂಡಿಕೆ ಯೋಜನೆಯ ಲಾಭ ಪಡೆಯುತ್ತಿವೆ. ಹೀಗಾಗಿ ಅದನ್ನು ಮತ್ತೆ ವಿಸ್ತರಿಸಬಾರದು’ ಎಂದು ಎಚ್‌ಡಿಎಫ್‌ಸಿ ಲಿಮಿಟೆಡ್‌ನ ಅಧ್ಯಕ್ಷ ದೀಪಕ್ ಪಾರೇಖ್ ಅವರು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಮನವಿ ಮಾಡಿದ್ದಾರೆ.

‘ಈ ಯೋಜನೆಯು ಹಣಕಾಸು ವಲಯ, ಅದರಲ್ಲಿಯೂ ಮುಖ್ಯವಾಗಿ ಬ್ಯಾಂಕೇತರ ಹಣಕಾಸು ಕಂಪನಿಗಳ (ಎನ್‌ಬಿಎಫ್‌ಸಿ) ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ’ ಎಂದು ಅವರು ಹೇಳಿದ್ದಾರೆ. ಆರ್‌ಬಿಐ ನಿರ್ದೇಶನದಂತೆ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಆಗಸ್ಟ್ 31ರವರೆಗೆ (ಆರು ತಿಂಗಳು) ಸಾಲ ಮರುಪಾವತಿ ಅವಧಿಯನ್ನು ಮುಂದೂಡಿವೆ.

ಕೋವಿಡ್–19 ಪರಿಣಾಮದಿಂದ ಉದ್ಯಮಗಳು ಹೊರಬಂದಿಲ್ಲ. ದೇಶದ ವಿವಿಧ ಭಾಗಗಳಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಿದೆ. ಹೀಗಾಗಿ ಯೋಜನೆಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸುವಂತೆ ಬೇಡಿಕೆ ಬರುತ್ತಿದೆ.

ಆರ್‌ಬಿಐ ಗವರ್ನರ್ ಅವರೊಂದಿಗೆ ಸಿಐಐ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪಾರೇಖ್, ‘ಸಾಮರ್ಥ್ಯ ಇದ್ದರೂ ಸಾಲದ ಕಂತು ಮರುಪಾವತಿಸದೇ ಇರುವವರನ್ನು ನೋಡುತ್ತಿದ್ದೇವೆ. ಹೀಗಾಗಿ ಯೋಜನೆಯನ್ನು ಮುಂದುವರಿಸಬೇಡಿ’ ಎಂದು ಮನವಿ ಮಾಡಿದರು. ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಗವರ್ನರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.