ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐ ನಿಯಂತ್ರಣಕ್ಕೆ ನಿಯಮಾವಳಿ: ಕೇಂದ್ರ

Published 20 ಫೆಬ್ರುವರಿ 2024, 16:32 IST
Last Updated 20 ಫೆಬ್ರುವರಿ 2024, 16:32 IST
ಅಕ್ಷರ ಗಾತ್ರ

ಮುಂಬೈ: ದೇಶದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನಕ್ಕೆ ನಿಯಂತ್ರಣ ವಿಧಿಸುವುದಕ್ಕೆ ಸಂಬಂಧಿಸಿದಂತೆ ಜೂನ್‌–ಜುಲೈನೊಳಗೆ ಸರ್ಕಾರವು ಕರಡು ನಿಯಮಾವಳಿಗಳನ್ನು ಬಿಡುಗಡೆಗೊಳಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ನಾಸ್ಕಾಂನಿಂದ ಮಂಗಳವಾರ ಹಮ್ಮಿಕೊಂಡಿದ್ದ ಎರಡು ದಿನಗಳ ನಾಯಕತ್ವ ಸಭೆಯಲ್ಲಿ ಮಾತನಾಡಿದ ಅವರು, ‘ಎಐ ನಿಯಂತ್ರಣಕ್ಕೆ ಚೌಕಟ್ಟು ರೂಪಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತ ನಿಯಮಾವಳಿಗಳನ್ನು ರೂಪಿಸುವ ಕಾರ್ಯ ಪ್ರಗತಿಯಲ್ಲಿದೆ. ಕೃತಕ ಬುದ್ಧಿಮತ್ತೆಯಿಂದ ಆರ್ಥಿಕ ಬೆಳವಣಿಗೆಗೆ ಎದುರಾಗುವ ಅಪಾಯಗಳನ್ನು ತಡೆಯಲು ಇದರಿಂದ ಸಹಕಾರಿಯಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT