ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಖಾಸಗೀಕರಣ: ರಾಜನ್ ಕಿವಿಮಾತು

Last Updated 14 ಮಾರ್ಚ್ 2021, 16:52 IST
ಅಕ್ಷರ ಗಾತ್ರ

ನವದೆಹಲಿ: ಭಾರತವನ್ನು 2024–25ರೊಳಗೆ ಐದು ಟ್ರಿಲಿಯನ್‌ ಡಾಲರ್‌ಗಳ ಅರ್ಥ ವ್ಯವಸ್ಥೆಯನ್ನಾಗಿ ಬೆಳೆಸುವುದಾಗಿ ಕೇಂದ್ರ ಸರ್ಕಾರ ಹೇಳಿರುವುದು ‘ಮಹತ್ವಾಕಾಂಕ್ಷೆಯದ್ದಾಗಿ ಕಾಣಿಸುತ್ತಿದೆ, ಲೆಕ್ಕಾಚಾರ ಮಾಡಿ ಹೇಳಿದಂತೆ ಕಾಣುತ್ತಿಲ್ಲ’ ಎಂದು ಅರ್ಥಶಾಸ್ತ್ರಜ್ಞ, ಆರ್‌ಬಿಐನ ಮಾಜಿ ಗವರ್ನರ್ ರಘುರಾಂ ರಾಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಬಗ್ಗೆ 2021–22ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜನ್, ‘ಖಾಸಗೀಕರಣವನ್ನು ಹೇಗೆ ಮಾಡಲಾಗುತ್ತದೆ ಎಂಬ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಿಲ್ಲ. ಆದರೆ, ಬ್ಯಾಂಕ್‌ಗಳನ್ನು ಕೈಗಾರಿಕಾ ಸಂಸ್ಥೆಗಳಿಗೆ ಮಾರಾಟ ಮಾಡುವುದು ಬಹುದೊಡ್ಡ ತಪ್ಪಾಗುತ್ತದೆ’ ಎಂದು ಹೇಳಿದ್ದಾರೆ. ಹಾಗೆಯೇ, ಬ್ಯಾಂಕ್‌ಗಳನ್ನು ವಿದೇಶಿ ಬ್ಯಾಂಕ್‌ಗಳಿಗೆ ಮಾರಾಟ ಮಾಡುವುದು ರಾಜಕೀಯ ಕಾರಣಗಳಿಂದಾಗಿ ಆಗದ ಕೆಲಸ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಖಾಸಗಿ ವಲಯದ ಬ್ಯಾಂಕ್‌ಗಳು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಖರೀದಿಸುವ ಸ್ಥಿತಿಯಲ್ಲಿ ಇದ್ದಿರಬಹುದು. ಆದರೆ, ಯಾವ ಬ್ಯಾಂಕ್‌ಗೆ ಹಾಗೆ ಖರೀದಿಸುವ ಶಕ್ತಿ ಇದೆ ಎನ್ನಲು ತಮ್ಮಿಂದಾಗದು ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT