ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ: ಜೈಲು ಶಿಕ್ಷೆ, ₹ 5 ಸಾವಿರ ದಂಡ

Last Updated 16 ಮಾರ್ಚ್ 2018, 7:52 IST
ಅಕ್ಷರ ಗಾತ್ರ

ಕೋಲಾರ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಸುರೇಶ್‌ಕುಮಾರ್ (25) ಎಂಬಾತನಿಗೆ ಎರಡನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದೆ.

ತಾಲ್ಲೂಕಿನ ವೇಮಗಲ್ ಹೋಬಳಿಯ ವೀರೇನಹಳ್ಳಿ ಗ್ರಾಮದ ಸುರೇಶ್‌ ಕುಮಾರ್‌ ಅದೇ ಗ್ರಾಮದ 15 ವರ್ಷದ ಬಾಲಕಿಯನ್ನು 2014ರ ಜೂನ್‌ 25ರಂದು ಅಪಹರಿಸಿದ್ದ. ಬಳಿಕ ಬಾಲಕಿಯನ್ನು ಆಂಧ್ರಪ್ರದೇಶದ ದಿಗುವ ಮದ್ದೇಪಲ್ಲಿಯ ಕೋಳಿ ಫಾರಂನಲ್ಲಿ ಒತ್ತೆಯಾಳಾಗಿ ಇರಿಸಿಕೊಂಡು ಅತ್ಯಾಚಾರ ಎಸಗಿದ್ದ.

ಈ ಸಂಬಂಧ ವೇಮಗಲ್ ಪೊಲೀಸರು ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಅಪಹರಣ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಸುರೇಶ್‌ ಕುಮಾರ್‌ನನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಎಸ್.ರೇಖಾ ಅವರು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT