ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಹಿವಾಟು: ಏಪ್ರಿಲ್‌ 1ರಿಂದ ಇ–ಇನ್ವಾಯ್ಸ್‌

Last Updated 9 ಮಾರ್ಚ್ 2021, 17:34 IST
ಅಕ್ಷರ ಗಾತ್ರ

ನವದೆಹಲಿ: ₹ 50 ಕೋಟಿಗಿಂತ ಹೆಚ್ಚಿನ ವಹಿವಾಟು ನಡೆಸುವ ವಾಣಿಜ್ಯ ಸಂಸ್ಥೆಗಳು ಬೇರೆ ವಾಣಿಜ್ಯ ಸಂಸ್ಥೆಗಳ ಜೊತೆ ನಡೆಸುವ ವಹಿವಾಟುಗಳಿಗೆ ಸಂಬಂಧಿಸಿದಂತೆ ಇ–ಇನ್ವಾಯ್ಸ್‌ ಸಿದ್ಧಪಡಿಸುವುದನ್ನು ಕೇಂದ್ರ ಸರ್ಕಾರ ಏಪ್ರಿಲ್‌ 1ರಿಂದ ಕಡ್ಡಾಯಗೊಳಿಸಿದೆ.

₹ 500 ಕೋಟಿಗಿಂತ ಹೆಚ್ಚಿನ ವಹಿವಾಟು ಹೊಂದಿರುವ ಕಂಪನಿಗಳು ಹಾಗೂ ₹ 100 ಕೋಟಿಗಿಂತ ಹೆಚ್ಚಿನ ವಹಿವಾಟು ಹೊಂದಿರುವ ಕಂಪನಿಗಳು ಇತರ ವಾಣಿಜ್ಯ ಸಂಸ್ಥೆಗಳ ಜೊತೆ ನಡೆಸುವ ವಹಿವಾಟುಗಳಿಗೆ ಇ–ಇನ್ವಾಯ್ಸ್‌ ಸಿದ್ಧಪಡಿಸುವುದು ಕಡ್ಡಾಯ ಎಂಬ ನಿಯಮ ಈಗಾಗಲೇ ಜಾರಿಗೆ ಬಂದಿದೆ.

ಏಪ್ರಿಲ್‌ 1ರಿಂದ ಈ ನಿಯಮವು ₹ 50 ಕೋಟಿ ವಹಿವಾಟು ನಡೆಸುವ ಕಂಪನಿಗಳಿಗೂ ಅನ್ವಯ ಆಗಲಿದೆ ಎಂದು ಕೇಂದ್ರ ಪರೋಕ್ಷ ತೆರಿಗೆ ಮತ್ತು ಸುಂಕಗಳ ಮಂಡಳಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT