ಬುಧವಾರ, ಡಿಸೆಂಬರ್ 2, 2020
23 °C
ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಹೇಳಿಕೆ

ಶೀಘ್ರ ಇನ್ನೊಂದು ಆರ್ಥಿಕ ಪ್ಯಾಕೇಜ್: ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಹೇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶೀಘ್ರದಲ್ಲೇ ಇನ್ನೊಂದು ಸುತ್ತಿನ ಆರ್ಥಿಕ ‍ಪುನಶ್ಚೇತನ ‍ಪ್ಯಾಕೇಜ್‌ ಘೋಷಿಸಲಿದ್ದಾರೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ತರುಣ್ ಬಜಾಜ್ ಮಂಗಳವಾರ ತಿಳಿಸಿದ್ದಾರೆ.

ಅರ್ಥ ವ್ಯವಸ್ಥೆಯ ವಿವಿಧ ಅಂಗಗಳಿಂದ ಬಂದಿರುವ ಮನವಿಗಳು ಹಾಗೂ ಸಲಹೆಗಳನ್ನು ಹಣಕಾಸು ಸಚಿವಾಲಯ ಪರಿಶೀಲಿಸುತ್ತಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಹೊಸ ಪ್ಯಾಕೇಜ್ ಯಾವ ದಿನ ಘೋಷಣೆ ಆಗುತ್ತದೆ ಎಂಬುದನ್ನು ಹೇಳುವುದು ಕಷ್ಟ. ಆದರೆ, ಅದು ಶೀಘ್ರವೇ ಆಗುತ್ತದೆ. ಹಣಕಾಸು ಸಚಿವರೇ ಆ ಬಗ್ಗೆ ವಿವರ ನೀಡಲಿದ್ದಾರೆ’ ಎಂದು ಬಜಾಜ್ ಹೇಳಿದರು. ಅರ್ಥ ವ್ಯವಸ್ಥೆಯಲ್ಲಿ ಬೇಡಿಕೆ ಹೆಚ್ಚಿಸಲು ಹಾಗೂ ಬಂಡವಾಳ ವೆಚ್ಚ ಹೆಚ್ಚು ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಿಂದಿನ ತಿಂಗಳು ಕೆಲವು ಕ್ರಮಗಳನ್ನು ಪ್ರಕಟಿಸಿದ್ದರು.

ಆಹಾರ ವಸ್ತುಗಳ ಬೆಲೆಯು ತುಟ್ಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬಜಾಜ್, ‘ಇದು ತಾತ್ಕಾಲಿಕ, ಅಷ್ಟೇ. ಬೆಲೆ ಹೆಚ್ಚಳ ನಿಯಂತ್ರಿಸಲು ಸರ್ಕಾರವು ಕೆಲವು ಕ್ರಮಗಳನ್ನು ಕೈಗೊಂಡಿದೆ’ ಎಂದರು. ಬೆಲೆ ಏರಿಕೆಗೂ ಸರಕು ಸಾಗಣೆಗೂ ನಂಟಿದೆ. ಹೊಸದಾಗಿ ಕಟಾವು ಮಾಡಿರುವ ಬೆಳೆ ಮಾರುಕಟ್ಟೆಗೆ ಬಂದಾದ ಬೆಲೆ ತಗ್ಗಲಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು