ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆಜಾನ್‌ ವಿರುದ್ಧ ತನಿಖೆ ಆರಂಭಿಸಿದ ಇ.ಡಿ

ಫೆಮಾ ಉಲ್ಲಂಘಿಸಿದ ಆರೋಪ
Last Updated 29 ಜನವರಿ 2021, 19:03 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ವಿನಿಮಯ ಕಾನೂನುಗಳು ಉಲ್ಲಂಘಿಸಿದ ಆರೋಪಕ್ಕಾಗಿ ಅಮೆಜಾನ್‌ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆಯ (ಫೆಮಾ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಈ ತನಿಖೆಯನ್ನು ಕೈಗೊಳ್ಳಲಾಗಿದೆ.

ಮಲ್ಟಿಬ್ರ್ಯಾಂಡ್‌ ಚಿಲ್ಲರೆ ವ್ಯವಹಾರಕ್ಕೆ ಸಂಬಂಧಿಸಿದಂತೆ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ವಿರುದ್ಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಾಣಿಜ್ಯ ಸಚಿವಾಲಯದಿಂದ ಸೂಚನೆ ದೊರೆತ ಬಳಿಕ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅಮೆಜಾನ್‌ ವಕ್ತಾರರು, ‘ಜಾರಿ ನಿರ್ದೇಶನಾಲಯವು ಅಮೆಜಾನ್‌ ವಿರುದ್ಧ ತನಿಖೆ ನಡೆಸುತ್ತಿರುವ ಬಗ್ಗೆ ಮಾಹಿತಿ ಇಲ್ಲ’ ಎಂದು ತಿಳಿಸಿದ್ದಾರೆ.

ಕಾನೂನುಬಾಹಿರವಾಗಿ ಹೂಡಿಕೆ ಮಾಡುವ ಮೂಲಕ ಫ್ಲಿಪ್‌ಕಾರ್ಟ್‌ ಮತ್ತು ಅಮೆಜಾನ್‌ ಕಂಪನಿಗಳು ಫೆಮಾ ಮತ್ತು ಎಫ್‌ಡಿಐ ಕಾನೂನುಗಳನ್ನು ಉಲ್ಲಂಘಿಸಿವೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಆರೋಪಿಸಿತ್ತು. ಈ ಬಗ್ಗೆಯೂ ಜಾರಿ ನಿರ್ದೇಶನಾಲಯ ಪರಿಶೀಲನೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಆಗಸ್ಟ್‌ ತಿಂಗಳಲ್ಲಿ ₹24713 ಕೋಟಿ ಮೊತ್ತದ ಫ್ಯೂಚರ್‌ ಗ್ರೂಪ್‌–ರಿಲಯನ್ಸ್‌ ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆಜಾನ್‌ ಆಕ್ಷೇಪ ವ್ಯಕ್ತಪಡಿಸಿದ್ದ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್‌ ಈ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿತ್ತು.

ಭವಿಷ್ಯದ ಚಿಲ್ಲರೆ ವಹಿವಾಟನ್ನು ನಿಯಂತ್ರಿಸುವ ಕ್ರಮಗಳನ್ನು ಅಮೆರಿಕ ಮೂಲದ ಕಂಪನಿ ಮಾಡುತ್ತಿದೆ. ಈ ಮೂಲಕ ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ ಮತ್ತು ವಿದೇಶಿ ನೇರ ಹೂಡಿಕೆಯ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT