ಅಂಬುಜಾ ಸಿಮೆಂಟ್ಸ್ (ಶೇ 0.55) ಮತ್ತು ಅದಾನಿ ಗ್ರೀನ್ ಎನರ್ಜಿ (ಶೇ 0.22) ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಇಳಿಕೆಗೆ ಕಾರಣವೇನು?: ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಪಾಲುದಾರಿಕೆ ಹೊಂದಿದ್ದರು ಎಂದು ಅಮೆರಿಕದ ಶಾರ್ಟ್ ಸೆಲ್ಲರ್ ಕಂಪನಿ ಹಿಂಡೆನ್‌ಬರ್ಗ್ ರಿಸರ್ಚ್ ಆರೋಪಿಸಿದೆ. ಇದರಿಂದ ಅದಾನಿ ಸಮೂಹದ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಷೇರು ಸೂಚ್ಯಂಕಗಳು ಇಳಿಕೆ:
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 56 ಅಂಶ ಇಳಿಕೆಯಾಗಿ, 79,648ಕ್ಕೆ ಅಂತ್ಯಗೊಂಡಿತು. ವಹಿವಾಟಿನ ವೇಳೆ ಒಂದು ಹಂತದಲ್ಲಿ 479 ಅಂಶ ಕುಸಿದಿತ್ತು.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 20 ಅಂಶ ಕಡಿಮೆಯಾಗಿ, 24,347ಕ್ಕೆ ಸ್ಥಿರಗೊಂಡಿದೆ.
ಸೆನ್ಸೆಕ್ಸ್ ಗುಚ್ಛದಲ್ಲಿ ಅದಾನಿ ಪೋರ್ಟ್ಸ್, ಎನ್‌ಟಿಪಿಸಿ, ಪವರ್ ಗ್ರಿಡ್, ಎಸ್‌ಬಿಐ, ನೆಸ್ಲೆ, ಮಹೀಂದ್ರ ಆ್ಯಂಡ್ ಮಹೀಂದ್ರ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಟಿಸಿಎಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಎಕ್ಸಿಸ್ ಬ್ಯಾಂಕ್, ಜೆಎಸ್‌ಡಬ್ಲ್ಯು ಸ್ಟೀಲ್, ಟಾಟಾ ಮೋಟರ್ಸ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.