ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಸಾರಿಗೆಗಳಿಗೆ ಇ–ಬಸ್‌ ಯೋಜನೆ

Last Updated 9 ಜನವರಿ 2023, 19:32 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಎಲ್ಲ ಸಾರ್ವಜನಿಕ ಸಾರಿಗೆ ವಾಹನಗಳನ್ನು ವಿದ್ಯುದ್ದೀಕರಣ ಮಾಡುವ ಉದ್ದೇಶದಿಂದ ಕೇಂದ್ರ ಭೂಸಾರಿಗೆ ಸಚಿವಾಲಯ ಹಾಗೂ ಭಾರಿ ಕೈಗಾರಿಕೆಗಳ ಸಚಿವಾಲಯವು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಇರುವ ಡೀಸೆಲ್‌ ಬಸ್‌ಗಳನ್ನು ಎಲೆಕ್ಟ್ರಿಕ್‌ ಬಸ್‌ಗಳಾಗಿ ಪರಿವರ್ತಿಸಲು ಯೋಜನೆ ಸಿದ್ಧಪಡಿಸುತ್ತಿದೆ.

ಇತ್ತೀಚೆಗೆ ನಡೆದ ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಹಾಯೋಜನೆ ಪರಿಶೀಲನಾ ಸಭೆಯಲ್ಲಿ, ರಾಜ್ಯಗಳಲ್ಲಿ ಇರುವ ಎಲ್ಲ ಡೀಸೆಲ್‌ ಬಸ್‌ಗಳನ್ನು ‘ಇ–ಬಸ್‌’ಗಳಾಗಿ ಪರಿವರ್ತಿಸಲು ಮಾರ್ಗಸೂಚಿ ಸಿದ್ಧಪಡಿಸಲು ತೀರ್ಮಾನಿಸಲಾಯಿತು ಎಂದು ಭೂಸಾರಿಗೆ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದರು.

ಭೂಸಾರಿಗೆ ಸಚಿವಾಲಯದ ಪ್ರಕಾರ, ಪ್ರಸ್ತುತ ದೇಶದ 56 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಒಟ್ಟು 1,49,095 ಬಸ್‌ಗಳನ್ನು ಹೊಂದಿದ್ದು, ಅವುಗಳಲ್ಲಿ 1,33,770 ಬಸ್‌ಗಳು ಕಾರ್ಯಾಚರಿಸುತ್ತಿವೆ. ಸಾರ್ವಜನಿಕ ಸಾರಿಗೆಯನ್ನು ವಿದ್ಯುದ್ದೀಕರಣ ಮಾಡಲು ರಾಷ್ಟ್ರೀಯ ಇ–ಬಸ್‌ ಯೋಜನೆಯಡಿ ಕೇಂದ್ರ ಸರ್ಕಾರವು 50 ಸಾವಿರ ಇ–ಬಸ್‌ಗಳನ್ನು ಖರೀದಿಸಲು ಯೋಜಿಸಿದೆ. ಈಗಿರುವ ಡೀಸೆಲ್‌ ಬಸ್‌ಗಳ ಬದಲು ಎಲೆಕ್ಟ್ರಿಕ್‌ ಬಸ್‌ಗಳಿಗೆ ಆದ್ಯತೆ ನೀಡುವ ಸಂಬಂಧ ಕೇಂದ್ರ ಸಚಿವಾಲಯ ಎಲ್ಲ ರಸ್ತೆ ಸಾರಿಗೆ ಸಂಸ್ಥೆಗಳ ಜತೆಗೆ ಸಂಪರ್ಕದಲ್ಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕನ್ವರ್ಜೆನ್ಸಿ ಎನರ್ಜಿ ಸರ್ವಿಸಸ್‌ ಲಿ. (ಸಿಇಎಸ್‌ಎಲ್‌) ರಾಷ್ಟ್ರೀಯ ಇ–ಬಸ್‌ ಯೋಜನೆಯಡಿ ₹5,000 ಕೋಟಿ ವೆಚ್ಚದಲ್ಲಿ 4,675 ಬಸ್‌ಗಳ ಖರೀದಿಗೆ ಇತ್ತೀಚೆಗೆ ಟೆಂಡರ್‌ ಕರೆದಿದೆ. ಎಲೆಕ್ಟ್ರಿಕ್‌ ಬಸ್‌ಗಳ ಖರೀದಿಗೆ ಕಳೆದ 15 ತಿಂಗಳಲ್ಲಿ ಕರೆದ ಮೂರನೇ ಟೆಂಡರ್‌ ಇದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT