ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಭೇಟಿ ದೃಢಪಡಿಸಿದ ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌

Published 11 ಏಪ್ರಿಲ್ 2024, 13:00 IST
Last Updated 11 ಏಪ್ರಿಲ್ 2024, 13:00 IST
ಅಕ್ಷರ ಗಾತ್ರ

ನವದೆಹಲಿ: ಅಮೆರಿಕದ ಎಲೆಕ್ಟ್ರಿಕ್‌ ಕಾರು ತಯಾರಿಕಾ ಕಂಪನಿ ಟೆಸ್ಲಾದ ಸಿಇಒ ಎಲಾನ್‌ ಮಸ್ಕ್‌ ಅವರು, ಇದೇ ತಿಂಗಳಿನಲ್ಲಿ ತಾವು ಭಾರತಕ್ಕೆ ಭೇಟಿ ನೀಡುವುದನ್ನು ದೃಢಪಡಿಸಿದ್ದಾರೆ.

‘ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ’ ಎಂದು ಅವರು ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ. 

ಏಪ್ರಿಲ್‌ 22ರಂದು ಮಸ್ಕ್‌ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ದೇಶದಲ್ಲಿ ಟೆಸ್ಲಾ ಕಂಪನಿಯ ಹೂಡಿಕೆ ಬಗ್ಗೆ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರವು ಇತ್ತೀಚೆಗೆ ಹೊಸ ಎಲೆಕ್ಟ್ರಿಕ್ ವಾಹನ ನೀತಿಯನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಮಸ್ಕ್‌ ಭೇಟಿ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT