ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ ಠೇವಣಿ ಮೇಲಿನ ಬಡ್ಡಿ ಶೇಕಡ 8.15ಕ್ಕೆ ಹೆಚ್ಚಳ

Last Updated 28 ಮಾರ್ಚ್ 2023, 13:01 IST
ಅಕ್ಷರ ಗಾತ್ರ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್‌ಒ) 2022–23ನೇ ಹಣಕಾಸು ವರ್ಷಕ್ಕೆ ನೌಕರರ ಪಿ.ಎಫ್‌. ಠೇವಣಿಗಳಿಗೆ ಬಡ್ಡಿಯನ್ನು ಶೇಕಡ 8.15ಕ್ಕೆ ಹೆಚ್ಚಿಸಿದೆ.

ಹಿಂದಿನ ಹಣಕಾಸು ವರ್ಷದಲ್ಲಿ (2021–22) ಬಡ್ಡಿಯನ್ನು ಶೇ 8.1ಕ್ಕೆ ನಿಗದಿ ಮಾಡಲಾಗಿತ್ತು. ಇದು ನಾಲ್ಕು ದಶಕಗಳ ಕನಿಷ್ಠ ಪ್ರಮಾಣವಾಗಿತ್ತು. 2020–21ರಲ್ಲಿ ಶೇ 8.5ರಷ್ಟು ಬಡ್ಡಿ ನೀಡಲಾಗಿತ್ತು.

ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ನೇತೃತ್ವದ ಇಪಿಎಫ್‌ಒ ಧರ್ಮದರ್ಶಿಗಳ ಮಂಡಳಿಯು 2022–23ನೇ ಸಾಲಿಗೆ ಶೇ 8.15ರಷ್ಟು ಬಡ್ಡಿ ನೀಡುವಂತೆ ಶಿಫಾರಸು ಮಾಡಿದೆ ಎಂದು ಕಾರ್ಮಿಕ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ದರಕ್ಕೆ ಕೇಂದ್ರ ಹಣಕಾಸು ಸಚಿವಾಲಯದ ಒಪ್ಪಿಗೆ ದೊರೆತ ನಂತರದಲ್ಲಿ, ಇದನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT